ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಸಂಪುಟ ವಿಸ್ತರಣೆ: ಸಚಿವಾಕಾಂಕ್ಷಿಗಳಲ್ಲಿ ಮಡುಗಟ್ಟಿದ ಅಸಮಾಧಾನ

ಡಿ.22 ರಂದು ಸಂಪುಟ ವಿಸ್ತರಣೆ ಮಾಡಲು ನಿರ್ಧರಿಸುವುದಾಗಿ ಬುಧವಾರ ಸಮನ್ವಯ ಸಭೆ ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸುತ್ತಿದ್ದಂತೆಯೇ ಪಕ್ಷದಲ್ಲಿ ಈ ಬಗ್ಗೆ ಅಪನಂಬಿಕೆ ಬಲಗೊಂಡಿದೆ...
ಬೆಂಗಳೂರು: ಡಿ.22 ರಂದು ಸಂಪುಟ ವಿಸ್ತರಣೆ ಮಾಡಲು ನಿರ್ಧರಿಸುವುದಾಗಿ ಬುಧವಾರ ಸಮನ್ವಯ ಸಭೆ ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸುತ್ತಿದ್ದಂತೆಯೇ ಪಕ್ಷದಲ್ಲಿ ಈ ಬಗ್ಗೆ ಅಪನಂಬಿಕೆ ಬಲಗೊಗಂಡಿದೆ. 
ಡಿ.22ಕ್ಕೆ ಸಂಪುಟ ವಿಸ್ತರಣೆಗೆ ಮುಹೂರ್ತ ನಿಗದಿಪಡಿಸಿರುವುದು ಕೇವಲ ಕಣ್ಣೊರೆಸುವ ತಂತ್ರ, ಲೋಕಸಭಾ ಚುನಾವಣೆವರೆಗೂ ಸಂಪುಟ ವಿಸ್ತರಣೆಯಾಗುವುದಿಲ್ಲ ಎಂದು ಸಚಿವಾಕಾಂಕ್ಷಿಗಳು ಹೇಳುತ್ತಿದ್ದಾರೆ. 
ಅಧಿವೇಶನ ಆರಂಭಕ್ಕೂ ಮುನ್ನ ಸಂಪುಟ ವಿಸ್ತರಣೆಯಾಗಬೇಕೆಂದು ನಾವು ಆಗ್ರಹಿಸಿದ್ದೆವು. ಈ ಭರವಸೆಯನ್ನು ಪಕ್ಷದ ಹಿರಿಯ ನಾಯಕರು ಈಡೇರಿಸುತ್ತಾರೆಂಬ ನಂಬಿಕೆ ನನಗಿಲ್ಲ. ಈ ಹಿಂದೆ ಕೂಡ ಇದೇ ರೀತಿ 5-6 ಬಾರಿ ಮಾಡಿದ್ದಾರೆ. ಈ ಬಾರಿ ಕೂಡ ಇದೇ ರೀತಿ ಆಗುತ್ತದೆ ಎಂದು ಕಂಪ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಜೆ.ಎನ್. ಗಣೇಶ್ ಅವರು ಹೇಳಿದ್ದಾರೆ.
ಇದರಂತೆ ರಾಮಲಿಂಗಾ ರೆಡ್ಡಿಯವರು ಮಾತನಾಡಿ, ಡಿ.22 ರಂದು ಸಂಪುಟ ವಿಸ್ತರಣೆ ಸಾಧ್ಯವೇ ಇಲ್ಲ. ಶೂನ್ಯ ಮಾಸದಲ್ಲಿ ವಿಸ್ತರಣೆ ನಡೆಸುವುದಿಲ್ಲ. ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇದೂವರೆಗೂ 10ಕ್ಕೂ ಹೆಚ್ಚು ಬಾರಿ ಸಂಪುಟ ವಿಸ್ತರಣೆಯನ್ನು ಮುಂದೂಡಲಾಗಿದೆ. ನೇರವಾಗಿ ಸಂಸತ್ ಚುನಾವಣೆವರೆಗೂ ಸಂಪುಟ ವಿಸ್ತರಣೆ ಮಾಡುವುದಿಲ್ಲ. ಎಂದಾದರೂ ಹೇಳಿದರೆ, ಶಾಸಕರು ತಮ್ಮ ಕ್ಷೇತ್ರಗಳ ಕೆಲಸವನ್ನಾದರೂ ನೋಡಬಹುದು ಎಂದು ಹೇಳಿದ್ದಾರೆ. 

Related Stories

No stories found.

Advertisement

X
Kannada Prabha
www.kannadaprabha.com