ವಿದೇಶಕ್ಕೆ ಹೋಗೋದು ಅಪರಾಧವೇ: ಸಿದ್ದರಾಮಯ್ಯ ಪ್ರಶ್ನೆ

ಜೆಡಿಎಸ್-ಕಾಂಗ್ರೆಸ್ ಸರ್ಕಾರದಲ್ಲಿ ಅತೃಪ್ತಿಯ ಹೊಗೆ ಎದ್ದಿದ್ದಾಗ ಒಮ್ಮೆ ಪ್ರಕೃತಿ ಚಿಕಿತ್ಸೆ, ಮತ್ತೊಮ್ಮೆ ಯುರೋಪ್ ಪ್ರವಾಸ ಕೈಗೊಂಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರು: ಜೆಡಿಎಸ್-ಕಾಂಗ್ರೆಸ್ ಸರ್ಕಾರದಲ್ಲಿ ಅತೃಪ್ತಿಯ ಹೊಗೆ ಎದ್ದಿದ್ದಾಗ ಒಮ್ಮೆ ಪ್ರಕೃತಿ ಚಿಕಿತ್ಸೆ, ಮತ್ತೊಮ್ಮೆ ಯುರೋಪ್ ಪ್ರವಾಸ ಕೈಗೊಂಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದೀಗ ಬೆಳಗಾವಿ ಅಧಿವೇಶನ ಬೆನ್ನಲ್ಲೇ ಮತ್ತೆ ವಿದೇಶಕ್ಕೆ ಹಾರಲು ಸಜ್ಜಾಗಿದ್ದಾರೆ. 
ಈ ಹಿನ್ನಲೆಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು, ವಿದೇಶಕ್ಕೆ ಹೋಗೋದೇನು ಅಪರಾಧವೇ? ಎಂದು ಪ್ರಶ್ನಿಸಿದ್ದಾರೆ. 
ವಿದೇಶಕ್ಕೆ ಹೋಗೋದು ಅಪರಾಧವೇ? ನನಗೂ ವೈಯಕ್ತಿಕ ಬದುಕು ಇದೆ ಅಲ್ಲವೇ? ಎಲ್ಲವನ್ನೂ ನಿಮ್ಮ ಮುಂದೆ ಹೇಳಿಯೇ ಹೋಗಬೇಕಾ? ಸ್ನೇಹಿತರ ಮನೆಯಲ್ಲಿ ಮದುವೆ ಇದೆ. ಹೀಗಾಗಿ ಹೋಗುತ್ತಿದ್ದೇನೆ ಅಷ್ಟೇ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com