ಸಂಗ್ರಹ ಚಿತ್ರ
ರಾಜಕೀಯ
ಬೆಳಗಾವಿ ಅಧಿವೇಶನ: ಅತೃಪ್ತ 10 ಕಾಂಗ್ರೆಸ್ ಶಾಸಕರು ಗೈರು ಹಾಜರು ಸಾಧ್ಯತೆ
ಕಾಂಗ್ರೆಸ್ ಪಾಳಯದಲ್ಲಿ ಅತೃಪ್ತಿಯ ಹೊಗೆಯಾಡುತ್ತಿದ್ದು, ಈ ನಡುವಲ್ಲೇ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ 10 ಅತೃಪ್ತ ಶಾಸಕರು ಬೆಳಗಾವಿ ಅಧಿವೇಶನಕ್ಕೆ ಗೈರು ಹಾಜರಾಗಲಿದ್ದಾರೆಂದು ಹೇಳಲಾಗುತ್ತಿದೆ...
ಬೆಂಗಳೂರು: ಕಾಂಗ್ರೆಸ್ ಪಾಳಯದಲ್ಲಿ ಅತೃಪ್ತಿಯ ಹೊಗೆಯಾಡುತ್ತಿದ್ದು, ಈ ನಡುವಲ್ಲೇ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ 10 ಅತೃಪ್ತ ಶಾಸಕರು ಬೆಳಗಾವಿ ಅಧಿವೇಶನಕ್ಕೆ ಗೈರು ಹಾಜರಾಗಲಿದ್ದಾರೆಂದು ಹೇಳಲಾಗುತ್ತಿದೆ.
ಕಾಂಗ್ರೆಸ್ ಶಾಸಕರ ಬಗ್ಗೆ ಮೈತ್ರಿ ಸರ್ಕಾರದಲ್ಲಿ ತಾರತಮ್ಯ ತೋರಲಾಗುತ್ತಿದೆ ಮತ್ತು ಕಾಂಗ್ರೆಸ್ ಶಾಸಕರು ಹೇಳಿದ ಕೆಲಸಗಳಿಗಿಂದ ಆ ಕ್ಷೇತ್ರದ ಜೆಡಿಎಸ್ ನಾಯಕರ ಮಾತುಗಳಿಗೆ ಹೆಚ್ಚಿನ ಮನ್ನಣೆ ನೀಡಲಾಗತ್ತಿದೆ ಎಂಬ ಅಸಮಾಧಾನ ಕಾಂಗ್ರೆಸ್ ನಲ್ಲಿ ತೀವ್ರವಾಗಿದ್ದು, ಈ ಹಿನ್ನಲೆಯಲ್ಲಿ ಅಧಿವೇಶನಕ್ಕೆ 10 ಕಾಂಗ್ರೆಸ್ ಶಾಸಕರು ಗೈರು ಹಾಜರಾಗಲಿದ್ದಾರೆಂದು ಜಾರಕಿಹೊಳಿ ಆಪ್ತ ಮೂಲಗಳು ಮಾಹಿತಿ ನೀಡಿವೆ.
ಬಳ್ಳಾರಿ, ರಾಯಚೂರು ಹಾಗೂ ಕೊಪ್ಪಳ ಮೂಲದ ಕಾಂಗ್ರೆಸ್ ಶಾಸಕರು ಅಧಿವೇಶನಕ್ಕೆ ಗೈರಾಗಲಿದ್ದಾರೆಂದು ತಿಳಿದುಬಂದಿದೆ.
ಕಳೆದ ಕೆಲ ವಾರಗಳಿಂದಲೂ ಜಾರಕಿಹೊಳಿ ನೇತೃತ್ವದ ತಂಡ ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದು, ಸಂಪುಟ ವಿಸ್ತರಣೆಯಾದ ಬಳಿಕ ಈ ತಂಡ ಅಂತಿಮ ನಿರ್ಧಾಗಳನ್ನು ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ಉತ್ತರ ಕರ್ನಾಟಕ ಹಾಗೂ ಹೈದರಾಬಾದ್ ಕರ್ನಾಟಕವನ್ನು ನಿರ್ಲಕ್ಷಿಸಿದ್ದಾರೆಂಬ ಆರೋಪಗಳನ್ನು ಎದುರಿಸುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ, ಅಧಿವೇಶಕ್ಕೆ ಕಾಂಗ್ರೆಸ್ ಶಾಸಕರ ಗೈರು ಹಾಜರು ದೊಡ್ಡ ತಲೆನೋವಾಗಿ ಪರಿಣಿಸಲಿದೆ.

