ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ

ಕಾಂಗ್ರೆಸ್ ಗೆಲುವು: ಸೋನಿಯಾ, ರಾಹುಲ್ ಪ್ರಯತ್ನಕ್ಕೆ ಸಿಕ್ಕ ಫಲ ಎಂದ ಸಿಎಂ ಕುಮಾರಸ್ವಾಮಿ

ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಈ ಫಲಿತಾಂಶ ಮುಂಬರುವ ಲೋಕಸಭಾ....
Published on
ಬೆಳಗಾವಿ: ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಈ ಫಲಿತಾಂಶ ಮುಂಬರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಮಧ್ಯ ಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ, ತೆಲಂಗಾಣ ಹಾಗೂ ಮಿಜೋರಾ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪತ್ರಿಕಾ ಪ್ರಕಟಣೆ ನೀಡಿರುವ ಸಿಎಂ, ಜಾತ್ಯತೀತ ಪಕ್ಷಗಳತ್ತ ರಾಷ್ಟ್ರ ಸಾಗುತ್ತಿದೆ ಎಂಬುದಕ್ಕೆ ವಿಧಾನಸಭೆ ಚುನಾವಣೆಯಲ್ಲಿ ಮತದಾರ ನೀಡಿರುವ ತೀರ್ಪು ಸಾಕ್ಷಿಯಾಗಿದೆ ಎಂದಿದ್ದಾರೆ.
ದೇಶಾದ್ಯಂತ ಏಕಪಕ್ಷೀಯ ಆಡಳಿತದ ನಿರೀಕ್ಷೆ ಇಟ್ಟುಕೊಂಡು ಪ್ರತಿಪಕ್ಷಗಳನ್ನು ದಮನ ಮಾಡಲು ಮುಂದಾಗಿದ್ದವರಿಗೆ ಇದೀಗ ಮುಖಭಂಗವಾಗಿದೆ ಎಂದು ಸಿಎಂ ಪರೋಕ್ಷವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಐದು ರಾಜ್ಯಗಳ ಫಲಿತಾಂಶ ಜಾತ್ಯತೀತ ಪಕ್ಷಗಳೆಲ್ಲವೂ ಜತೆಯಾಗಿ ಚುನಾವಣೆ ಎದುರಿಸಲು ವೇದಿಕೆಯನ್ನು ದೊರಕಿಸಿಕೊಟ್ಟಿದೆ. ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಹಾಗೂ  ಕಾಂಗ್ರೆಸ್ ಅಧ್ಯಕ್ಷ ರಾಹುಲ್​ ಗಾಂಧಿಯವರ ಪ್ರಯತ್ನಕ್ಕೆ ಸಿಕ್ಕ ಫಲ ಇದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com