ಸೈದ್ಧಾಂತಿಕವಾಗಿ ಗಟ್ಟಿಗೊಂಡು ನೆಲದಲ್ಲಿ ಕಾಲೂರಿ ಹೋರಾಟದಲ್ಲಿ ತೊಡಗಬೇಕಾದ ಕಾಲ: ಸಿದ್ದರಾಮಯ್ಯ ಟ್ವೀಟ್
ಪಂಚರಾಜ್ಯ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ...
ಬೆಂಗಳೂರು: ಪಂಚರಾಜ್ಯ ಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.
ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಪ್ರಚಾರದ ಗಾಳಿಪಟಗಳು ನೆಲಕ್ಕುರುಳುತ್ತಿವೆ. ಇದು ಗೆದ್ದು ಬೀಗುವ ಸಮಯ ಅಲ್ಲ. ಸೈದ್ಧಾಂತಿಕವಾಗಿ ಗಟ್ಟಿಗೊಂಡು ನೆಲದಲ್ಲಿ ಕಾಲೂರಿ ಹೋರಾಟದಲ್ಲಿ ತೊಡಗಬೇಕಾದ ಕಾಲ ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.
ಛತ್ತೀಸಗಢದಲ್ಲಿ ಕಾಂಗ್ರೆಸ್ ಗೆ ಸರಳ ಬಹುಮತ ಸಿಕ್ಕಿದೆ. ಮಧ್ಯಪ್ರದೇಶ ಹಾಗೂ ರಾಜಸ್ತಾನದಲ್ಲೂ ಕಾಂಗ್ರೆಸ್ ಸರ್ಕಾರ ರಚಿಸುವ ಸಾಧ್ಯತೆ ಹೆಚ್ಚಿದೆ. ಇನ್ನು ತೆಲಂಗಾಣದಲ್ಲಿ ಟಿಆರ್ಎಸ್ ಗೆ ಸ್ಪಷ್ಟ ಬಹುಮತ ಸಿಕ್ಕಿದೆ. ಮಿಜೋರಾಂನಲ್ಲಿ ಪ್ರಾದೇಶಿಕ ಪಕ್ಷ ಎಂಎನ್ಎಫ್ ಗೆ ಸ್ಪಷ್ಟಬಹುಮತ ಸಿಕ್ಕಿದೆ.
ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಪ್ರಚಾರದ ಗಾಳಿಪಟಗಳು ನೆಲಕ್ಕುರುಳುತ್ತಿವೆ. ಇದು ಗೆದ್ದು ಬೀಗುವ ಸಮಯ ಅಲ್ಲ.