2017ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವನ್ನು ಕಂಡಿತ್ತು. ಪಂಜಾಬ್ ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಕಾಂಗ್ರೆಸ್ ನೆಲಕಚ್ಚಿತ್ತು. ಅಂದು ನರೇಂದ್ರ ಮೋದಿ ತಮ್ಮ ಟ್ವೀಟರ್ ನಲ್ಲಿ ಕಾಂಗ್ರೆಸ್ ಮುಕ್ತ ಭಾರತ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್ ಅನ್ನೇ ಬಳಸಿ ರಮ್ಯಾ ನೇರವಾಗಿ ಬಿಜೆಪಿ ಮುಕ್ತ ಭಾರತ ಎಂದು ಟ್ವೀಟಿಸಿದ್ದಾರೆ.