ದಿಢೀರ್ ರಾಜಕೀಯ ಬೆಳವಣಿಗೆ ಹಿನ್ನಲೆ: ವಿದೇಶಿ ಪ್ರವಾಸದಿಂದ ಮೂರೇ ದಿನಕ್ಕೆ ಸಿದ್ದರಾಮಯ್ಯ ವಾಪಸ್‌‌!

ರಾಜ್ಯದಲ್ಲಿ ನಡೆಯುತ್ತಿರುವ ದಿಢೀರ್ ರಾಜಕೀಯ ಬೆಳವಣಿಗೆಗಳಿಂದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ವಿದೇಶ ಪ್ರವಾಸವನ್ನು ದಿಢೀರ್ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ದಿಢೀರ್ ರಾಜಕೀಯ ಬೆಳವಣಿಗೆಗಳಿಂದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ವಿದೇಶ ಪ್ರವಾಸವನ್ನು ದಿಢೀರ್ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
ಈ ಹಿಂದೆ ನನಗೂ ವ್ಯಯಕ್ತಿಕ ಜೀವನವಿದೆ ಎಂದು ಹೇಳಿ ಐದು ದಿನಗಳ ವಿದೇಶ ಪ್ರವಾಸಕ್ಕೆ ತೆರಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ದಿಢೀರ್ ನಗರಕ್ಕೆ ಹಿಂತಿರುಗುತ್ತಿರುವ ಕಾರಣ ರಾಜಕಾರಣಿಗಳಲ್ಲಿ ಬೇರೆ ಬೇರೆ ರಾಜಕೀಯ ಲೆಕ್ಕಚಾರಗಳು ಆರಂಭವಾಗಿವೆ. ಕುಟುಂಬಕ್ಕೆ ಆಪ್ತರಾಗಿರುವ ಸ್ನೇಹಿತರ ಮಗನ ಮದುವೆಗೆಂದು ಸೋಮವಾರ ಮಲೇಷ್ಯಾಗೆ ತೆರಳಿದ್ದ ಸಿದ್ದರಾಮಯ್ಯ ನಗರಕ್ಕೆ ಹಿಂದಿರುಗಿದ್ದಾರೆ ಎಂದು ಅವರ ಆಪ್ತ ವಲಯಗಳು ತಿಳಿಸಿವೆ. ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭಕ್ಕೂ ಮೊದಲೇ ವಿದೇಶ ಪ್ರವಾಸಕ್ಕೆ ಹೊರಟಿದ್ದ ಅವರು ಐದು ದಿನ ಬಳಿಕ ವಾಪಾಸಾಗಲಿದ್ದಾರೆ ಎನ್ನಲಾಗಿತ್ತು.
ಆದರೆ, ಮೂರನೇ ದಿನಕ್ಕೆ ನಗರಕ್ಕೆ ಹಿಂದಿರುಗಿದ್ದು, ಡಿ. 17ರಿಂದಲೇ ಸಿದ್ದರಾಮಯ್ಯನವರು ಅಧಿವೇಶನದಲ್ಲಿ ಭಾಗಿಯಾಗಲಿದ್ದಾರೆ. ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಅವರು ಇದ್ದಕ್ಕಿದ್ದಂತೆ ವಿದೇಶ ಪ್ರವಾಸ ಹೊರಟ್ಟಿದ್ದು ಅನೇಕರ ಹುಬ್ಬೇರುವಂತೆ ಮಾಡಿತ್ತು. ಅಧಿವೇಶನದಲ್ಲಿ ನಿರೀಕ್ಷೆಯಂತೆ ಬೆಳಗಾವಿಯ ರೈತರು ಸರಕಾರದ ವಿರುದ್ಧ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ ಎನ್ನುವ ವಿಷಯ ಗೊತ್ತಿದ್ದರೂ ಸಿದ್ದರಾಮಯ್ಯಅಧಿವೇಶನದಲ್ಲಿ ಭಾಗಿಯಾಗದಿರುವುದು ಹಲವು ಅನುಮಾನಗಳಿಗೂ ಕಾರಣವಾಗಿತ್ತು.
ಸಭಾಪತಿ ಆಯ್ಕೆ ವಿಚಾರದಲ್ಲಿ ಸಿದ್ದು ಬಣಕ್ಕೆ ಶಾಕ್ ಕೊಟ್ಟ ಪರಮ್ ಬಣ
ಇನ್ನು ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವಂತೆ ಎಸ್.ಆರ್. ಪಾಟೀಲ್ ಅವರಿಗೆ ಸಿದ್ದರಾಮಯ್ಯ ತಿಳಿಸಿದ್ದರು. ಅಷ್ಟೇ ಅಲ್ಲದೆ ಈ ಕುರಿತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೂ ಸೂಚನೆ ನೀಡಿ ವಿದೇಶಿ ಪ್ರವಾಸ ಹಾಗೂ ಆಪ್ತರ ಮದುವೆಗೆ ಮಲೇಷಿಯಾಕ್ಕೆ ತೆರಳಿದ್ದರು. ಆದರೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರಾಗಿರುವಾಗಲೇ ಮೂಲ ಕಾಂಗ್ರೆಸ್ಸಿಗರಾದ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್, ಸಚಿವ ಡಿ.ಕೆ.ಶಿವಕುಮಾರ್ ಬಣದ ಸದಸ್ಯರು ಪ್ರತಾಪ್ ಚಂದ್ರಶೆಟ್ಟಿ ಅವರನ್ನು ಸಭಾಪತಿ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ. ಇದರಿಂದ ಶಾಕ್ ಗೆ ಒಳಗಾದ ಸಿದ್ದರಾಮಯ್ಯ ಅವರು ಆಪ್ತರ ಮದುವೆ ಮುಗಿಸಿ, ಪ್ರವಾಸ ಮೊಟಕುಗೊಳಿಸಿ ಬೆಂಗಳೂರಿಗೆ ವಿಮಾನ ಹತ್ತಿದ್ದಾರೆ.
ಮಲೇಷಿಯಾದಲ್ಲಿ ಆಪ್ತರ ಮದುವೆ ಮುಗಿಸಿ ಬೇರೆ ಬೇರೆ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಡಿಸೆಂಬರ್ 16ರಂದು ವಾಪಸ್ ಬರಲು ಸಿದ್ದರಾಮಯ್ಯ ತೀರ್ಮಾನಿಸಿದ್ದರು. ಆದರೆ ರಾಜ್ಯ ರಾಜಕಾರಣದ ಶಾಕ್‍ಗೆ ಒಳಗಾಗಿ ವಿಮಾನ ಹತ್ತಿರುವ ಮಾಜಿ ಸಿಎಂ ಇಂದು ರಾತ್ರಿ 10.30ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com