ಉದ್ದೇಶಪೂರ್ವಕವಾಗಿ ಉತ್ತರ ಕರ್ನಾಟಕ ಭಾಗ ನಿರ್ಲಕ್ಷ್ಯ: ಲಿಂಗಾಯತ ಸಮುದಾಯದ ಆಕ್ರೋಶ

ಹಿರಿಯ ನಾಯಕ ಹಾಗೂ ಎಂಎಲ್ ಸಿ ಎಸ್ ಆರ್ ಪಾಟೀಲ್ ಅವರನ್ನು ಪರಿಷತ್ ಸಭಾಪತಿ ಸ್ಥಾನದಿಂದ ಕೈ ಬಿಟ್ಟಿರುವುದು ಕಾಂಗ್ರೆಸ್ ಉತ್ತರ ಕರ್ನಾಟಕ ಮತ್ತು ....
ಎಂ.ಬಿ ಪಾಟೀಲ್ ಮತ್ತು ಎಸ್.ಆರ್ ಪಾಟೀಲ್
ಎಂ.ಬಿ ಪಾಟೀಲ್ ಮತ್ತು ಎಸ್.ಆರ್ ಪಾಟೀಲ್
ಬೆಂಗಳೂರು: ಹಿರಿಯ ನಾಯಕ ಹಾಗೂ ಎಂಎಲ್ ಸಿ ಎಸ್ ಆರ್ ಪಾಟೀಲ್ ಅವರನ್ನು ಪರಿಷತ್ ಸಭಾಪತಿ ಸ್ಥಾನದಿಂದ ಕೈ ಬಿಟ್ಟಿರುವುದು ಕಾಂಗ್ರೆಸ್ ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ನಡುವಿನ ಮಲತಾಯಿ ಧೋರಣೆ ಆರೋಪಕ್ಕೆ ಮತ್ತಷ್ಟು ತುಪ್ಪ ಸುರಿದಂತಾಗಿದೆ.
ಪರಿಷತ್ ಸಭಾಪತಿ ಜಗಳ ಉತ್ತರ ಮತ್ತು ದಕ್ಷಿಣದ ನಡುವಿನ ಕಲಹಕ್ಕೆ ವೇದಿಕೆಯಾಗಿ ಪರಿಣಮಿಸಿದೆ. ಜೆಡಿಎಸ್ ನ ಪ್ರಮುಖ ನಾಯಕ ಬಸವರಾಜ ಹೊರಟ್ಟಿ ಕೂಡ ತಮಗೆ ಸ್ಥಾನ ಸಿಗದಿರುವುದಕ್ಕೆ ಬೇಸರ ವ್ಯಕ್ತ ಪಡಿಸಿದ್ದಾರೆ, ಇಷ್ಯವಿಲ್ಲದ ಮನಸ್ಸಿನಿಂದ ಪ್ರತಾಪ್ ಚಂದ್ರ ಶೆಟ್ಟಿ ಅವರಿಗೆ ತಮ್ಮ ಸ್ಥಾನ ಬಿಟ್ಟುಕೊಟ್ಟಿದ್ದಾರೆ. 
ಉತ್ತರ ಕರ್ನಾಟಕ ಭಾಗದ ಲಿಂಗಾಯತ ಶಾಸಕರು ತಮ್ಮ ಪ್ರದೇಶವನ್ನು ಪ್ರತಿನಿಧಿಸುವ ನಾಕರಿಗೆ ಯಾವುದೇ ಸ್ಥಾನಮಾನ ನೀಡದಿರುವುದಕ್ಕೆ ಆಕ್ರೋಶ ಗೊಂಡಿದ್ದಾರೆ. ಕಾಂಗ್ರೆಸ್ ಗೆ ಸಭಾಪತಿ ಸ್ಥಾನ ಬಿಟ್ಟುಕೊಟ್ಟಿರುವ ದೇವೇಗೌಡರ ನಿರ್ಧಾರಕ್ಕೆ ಜೆಡಿಎಸ್ ಶಾಸಕರು ಮತ್ತು ಪರಿಷತ್ ಸದಸ್ಯರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ, 
ಪ್ರತಾಪ ಚಂದ್ರ ಶೆಟ್ಟಿ ಕರಾವಳಿ ಭಾಗದವರಾಗಿದ್ದು, ಉತ್ತರ ಕರ್ನಾಟಕವನ್ನು ಮತ್ತೆ ನಿರ್ಲಕ್ಷ್ಯಿಸಲಾಗುತ್ತಿದೆ ಎಂದು ಆರೋಪಿಸಲಾಗಿದೆ, ಉತ್ತರ ಕರ್ನಾಟಕದಲ್ಲಿ 41 ಶಾಸಕ ಪೈಕಿ 5 ಸಚಿವ ಸ್ಥಾನ ಲಭ್ಯವಾಗಿದೆ. ಆದರೆ, ದಕ್ಷಿಣ ಕರ್ನಾಟಕದಲ್ಲಿ 36 ಶಾಸಕರ ಪೈಕಿ 9 ಸಚಿವ ಸ್ಥಾನ ಸಿಕ್ಕಿದೆ. ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿರುವುದು ಸ್ಪಷ್ಟವಾಗಿ ಗೊತ್ತಾಗುತ್ತಿದೆ ಎಂದು ಮಾಜಿ ಸಚಿವ ಎಂಬಿ ಪಾಟೀಲ್ ಬೇಸರ ವ್ಯಕ್ತ ಪಡಿಸಿದ್ದಾರೆ.
ಉತ್ತರ ಕರ್ನಾಟಕದ ಪ್ರಬಲ ನಾಯಕರನ್ನು ಉದ್ದೇಶ ಪೂರ್ವಕವಾಗಿ ನಿರ್ಲಕ್ಷಿಸಲಾಗುತ್ತಿದೆ. ಈ ಭಾಗದ ಜನರ ತಾಳ್ಮೆ ಪರೀಕ್ಷಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com