ಡಿಸೆಂಬರ್ 22 ಸಂಪುಟ ವಿಸ್ತರಣೆ: ಕಾಂಗ್ರೆಸ್ ಆಕಾಂಕ್ಷಿಗಳಲ್ಲಿ ಅನುಮಾನದ ಕಾರ್ಮೋಡ!

ಡಿಸೆಂಬರ್ 22 ರಂದು ಸಂಪುಟ ವಿಸ್ತರಣೆ ಬಗ್ಗೆ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಗಳಲ್ಲಿ ಅನುಮಾನ ಕಾಡತೊಡಗಿದೆ.ಆದಾಗ್ಯೂ, ಸಂಪುಟ ವಿಸ್ತರಣೆ ವಿಳಂಬ ಮಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್

ಬೆಂಗಳೂರು: ಡಿಸೆಂಬರ್ 22 ರಂದು ಸಂಪುಟ ವಿಸ್ತರಣೆ ಬಗ್ಗೆ ಕಾಂಗ್ರೆಸ್ ಪಕ್ಷದ ಆಕಾಂಕ್ಷಿಗಳಲ್ಲಿ ಅನುಮಾನ ಕಾಡತೊಡಗಿದೆ. ಸಚಿವ ಸ್ಥಾನ ಸಿಗದಿರುವವರು ಬಂಡಾಯ ಏಳುವುದರಿಂದ ಸಮ್ಮಿಶ್ರ ಸರ್ಕಾರದ ಸ್ಥಿರತೆ ಮೇಲೆ ಪರಿಣಾಮ ಬೀರುವ ಆತಂಕದಲ್ಲಿ  ನಾಯಕರು ಮತ್ತೊಂದು ಸುಳ್ಳಿನ ಭರವಸೆ ನೀಡಿದ್ದಾರೆ ಎಂದು ಹಲವರು ಹೇಳಿಕೊಳ್ಳುತ್ತಿದ್ದಾರೆ.

ಆದಾಗ್ಯೂ, ಸಂಪುಟ ವಿಸ್ತರಣೆ ವಿಳಂಬ ಮಾಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಚಳಿಗಾಲ ಅಧಿವೇಶನಕ್ಕೂ ಮುಂಚಿತವಾಗಿ ನಡೆದ ಶಾಸಕಾಂಗ ಸಭೆಯಲ್ಲಿ ಡಿಸೆಂಬರ್ 22 ರಂದು ಸಂಪುಟ ವಿಸ್ತರಣೆ  ನಡೆಯಲಿದೆ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಘೋಷಿಸಿದ್ದರು.  ಡಿಸೆಂಬರ್ 18 ರಂದು ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಈ ವಿಚಾರದ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ.

ಹಲವು ತಿಂಗಳುಗಳಿಂದ ಸಂಪುಟ ವಿಸ್ತರಣೆ ಮಾಡುವುದಾಗಿ ನಾಯಕರು ಹೇಳುತ್ತಲೇ ಇದ್ದಾರೆ. ಆದರೆ.  ಡಿಸೆಂಬರ್ 22 ಸಂಪುಟ ವಿಸ್ತರಣೆ ಮಾಡುತ್ತಾರೆ ಎಂಬ ಭರವಸೆ ಇಲ್ಲ ಎಂದು  ಬಿರಿಯ ಕಾಂಗ್ರೆಸ್ ಮುಖಂಡ ಹಾಗೂ ಸಚಿವ ಸ್ಥಾನದ ಆಕಾಂಕ್ಷಿಯೊಬ್ಬರು ಹೇಳಿದ್ದಾರೆ.

ಇನ್ನೂ ಕೆಲವು ದಿನ ಕಾಂಗ್ರೆಸ್ ಹೈಕಮಾಂಡ್  ರಾಜಸ್ತಾನ, ಮಧ್ಯಪ್ರದೇಶ, ಮತ್ತು ಛತ್ತೀಸ್ ಗಡ  ಸರ್ಕಾರ ರಚನೆ ಸಂಬಂಧ ಬ್ಯೂಸಿಯಾಗಲಿದ್ದು,  ಕರ್ನಾಟಕದ ಬಗ್ಗೆ  ಆದ್ಯತೆ ನೀಡುವುದು ಕಡಿಮೆ ಎನ್ನಲಾಗುತ್ತಿದೆ.

 ಎಐಸಿಸಿ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಸೇರಿದಂತೆ ಹಲವು ನಾಯಕರು ಹಿರಿಯ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಯಾವುದೇ ಪ್ರಮುಖ ವಿಚಾರಗಳ ಸಂದರ್ಭದಲ್ಲಿ ಪ್ರಮುಖ ನಾಯಕರ ಕಡೆಗಣನೆ ಈ ನಾಯಕರ ಅಸಮಾಧಾನಕ್ಕೆ ಕಾರಣವಾಗಿದೆ.

ಕೆಲ ನಾಯಕರು ಮಾತ್ರ ಜೆಡಿಎಸ್ ನಾಯಕತ್ವದೊಂದಿಗೆ ಹೊಂದಾಣಿಕೆಯಲ್ಲಿದ್ದಾರೆ. ಇದು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಮೇಲೆ ಪರಿಣಾಮ ಬೀರಲಿದೆ ಎಂದು ಮಾಜಿ ನಾಯಕರೊಬ್ಬರು ಹೇಳುತ್ತಾರೆ.

 ಸಭಾಪತಿ ಆಯ್ಕೆ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರ ಕಡೆಗಣನೆಯಿಂದ  ಕಾಂಗ್ರೆಸ್ ಪಕ್ಷದೊಳಗಿನ ಹಲವು ನಾಯಕರು ಆಕ್ರೋಶಗೊಂಡಿದ್ದಾರೆ. ಕೊನೆ ಕ್ಷಣದಲ್ಲಿ ನಡೆದ ಬೆಳವಣಿಗೆಯಲ್ಲಿ  ಎಸ್ ಆರ್ ಪಾಟೀಲ್ ಅವರನ್ನು ತುಳಿದು ಪ್ರತಾಪ್ ಚಂದ್ರ ಶೆಟ್ಟಿ ಅವರನ್ನು ಸಭಾಪತಿಯನ್ನಾಗಿ ಮಾಡಲಾಗಿದೆ.

ಆದಾಗ್ಯೂ,  ಸಿದ್ದರಾಮಯ್ಯ ನಾಯಕತ್ವದ ಬಗ್ಗೆ  ಪಕ್ಷದ ಶಾಸಕರಿಗೆ ಅಸಮಾಧಾನವಿದೆ ಎಂಬುದು ಸುಳ್ಳಿನ ವಿಚಾರ ಎನ್ನುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್  ಡಿಸೆಂಬರ್ 22 ರಂದು ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com