ಇಬ್ಬರು ಸಿಎಂಗಳ ಪ್ರಮಾಣ ವಚನ ಇಂದು: ಶಕ್ತಿ ಪ್ರದರ್ಶನಕ್ಕೆ ಸಿಎಂ ಸೇರಿ ರಾಜ್ಯದ ಪ್ರಮುಖ ನಾಯಕರು ರಾಜಸ್ಥಾನಕ್ಕೆ

ಪಂಚ ರಾಜ್ಯಗಳ ಚುನಾವಣೆ ಪೈಕಿ 3 ರಾಜ್ಯಗಳಲ್ಲಿ ಕಾಂಗ್ರೆಸ್ ಐತಿಹಾಸಿಕ ಗೆಲವು ದಾಖಲಿಸಿದ್ದು, ಈ ಪೈಕಿ ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷದ ಇಬ್ಬರು ನಾಯಕರು ಸೋಮವಾರ ಮುಖ್ಯಮಂತ್ರಿ...
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
Updated on: 
ಬೆಂಗಳೂರು: ಪಂಚ ರಾಜ್ಯಗಳ ಚುನಾವಣೆ ಪೈಕಿ 3 ರಾಜ್ಯಗಳಲ್ಲಿ ಕಾಂಗ್ರೆಸ್ ಐತಿಹಾಸಿಕ ಗೆಲವು ದಾಖಲಿಸಿದ್ದು, ಈ ಪೈಕಿ ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷದ ಇಬ್ಬರು ನಾಯಕರು ಸೋಮವಾರ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆ ವೇಳೆ ಈಗಾಗಲೇ ತಂತ್ರಗಳನ್ನು ರೂಪಿಸುತ್ತಿರುವ ವಿರೋಧ ಪಕ್ಷಗಳು ಇದೀಗ ಈ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿವೆ. 
ಎರಡು ರಾಜ್ಯಗಳಲ್ಲಿ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಇತರೆ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆಂದು ಹೇಳಿಲಾಗುತ್ತಿದೆ. 
ಮಧ್ಯಪವ್ರದೇಶ ಹಾಗೂ ರಾಜಸ್ಥಾನ ರಾಜ್ಯಗಳಲ್ಲಿ ಕಮಲ್ ನಾಥ್ ಹಾಗೂ ಅಶೋಕ್ ಗೆಹ್ಲೋಟ್ ಅವರು ನೂತನ ಮುಖ್ಯಮಂತ್ರಿಗಳಾಗಿ ಇಂದು ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಾರೆ. ಈ ಸಮಾರಂಭದಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಸೇರಿದಂತೆ ರಾಜ್ಯದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಪ್ರಮುಖ ನಾಯಕರೂ ಕೂಡ ಭಾಗಿಯಾಗಲಿದ್ದಾರೆಂದು ವರದಿಗಳು ತಿಳಿಸಿವೆ. 

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಮುಖ್ಯಸ್ಥ ದಿನೇಶ್ ಗುಂಡೂರಾವ್, ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಕೂಡ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿದ್ದು, ಇದರಿಂದಾಗಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಬಹುತೇಕ ನಾಯಕರು ಗೈರು ಹಾಜರಾಗುವ ಸಾಧ್ಯತೆಗಳಿವೆ ಎಂದು ಹೇಳಾಲಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com