1984ರ ಸಿಖ್ ಗಲಭೆ ತೀರ್ಪು; ರಾಹುಲ್ ಗಾಂಧಿ ರಾಜೀನಾಮೆಗೆ ಬಿಜೆಪಿ ಒತ್ತಾಯ

1984ರ ಸಿಖ್ ಸಾಮೂಹಿಕ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ರಾಪೇಲ್ ಡೀಲ್ ಗೆ ಸಂಬಂಧ ಮಾಡಿದ್ದ ಆರೋಪಕ್ಕೆ ನೈತಿಕ ಹೊಣೆ ಹೊತ್ತು ಎಐಸಿಸಿ ...
ಸಂಬಿತ್ ಪಾತ್ರ
ಸಂಬಿತ್ ಪಾತ್ರ
ಬೆಂಗಳೂರು: 1984ರ ಸಿಖ್ ಸಾಮೂಹಿಕ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ರಾಪೇಲ್ ಡೀಲ್ ಗೆ ಸಂಬಂಧ ಮಾಡಿದ್ದ ಆರೋಪಕ್ಕೆ ನೈತಿಕ ಹೊಣೆ ಹೊತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜಿನಾಮೆ ನೀಡಬೇಕೆಂದು ಬಿಜೆಪಿ ಆಗ್ರಹಿಸಿದೆ.
ರಾಫೇಲ್ ಡೀಲ್ ಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಸುಪ್ರೀಕೋರ್ಟ ಗೆ ಪಿಐಎಲ್ ಸಲ್ಲಿಸಿ ಜನರು ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ. ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಹೇಳಿದ್ದಾರೆ. ರಾಫೇಲ್ ಡೀಲ್ ಸಂಬಂಧ ನ್ಯಾಯಾಲಯ ಕ್ಲೀನ್ ಚಿಟ್ ನೀಡಿದೆ, ಅದಕ್ಕಾಗಿ ನ್ಯಾಯಾಂಗ ವ್ಯವಸ್ಥೆಗೆ ಧನ್ಯವಾದ ಅರ್ಪಿಸಿದ್ದಾರೆ.
1984ರ ಸಿಖ್ ದಂಗೆ ಸಂಬಂಧ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ, ಸಿಖ್ ಗಲಭೆ ಸಂಬಂಧ ರಾಹುಲ್ ಗಾಂಧಿಗೆ ಎಲ್ಲಾ ತಿಳಿದಿತ್ತು ಹೀಗಿದ್ದರೂ ಅವರು ಸತ್ಯ ಮುಚ್ಚಿಟ್ಟಿದ್ದರು, ಇದಕ್ಕಾಗಿ ರಾಹುಲ್ ಗಾಂಧಿ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com