ಸಿದ್ದು ನೇತೃತ್ವದಲ್ಲಿಂದು ಕಾಂಗ್ರೆಸ್ ಶಾಸಕಾಂಗ ಸಭೆ: ಹಲವು ವಿಚಾರಗಳ ಕುರಿತು ಚರ್ಚೆ

ರಾಜ್ಯದಲ್ಲಿ ಅದಿಕಾರಕ್ಕೆ ಬಂದಿರುವ ಜೆಡಿಎಸ್-ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿ ಹಾಗೂ ತಮ್ಮ ಪಕ್ಷದ ಹಿರಿಯ ನಾಯಕರ ನಡವಳಿಕೆಯೂ ಸೇರಿದಂತೆ ಹಲವು ಕಾರಣಗಳಿಂದಾಗಿ ಅಸಮಾಧಾನದ ಗೂಡಾಗಿರುವ ಕಾಂಗ್ರೆಸ್ ಶಾಸಕರು...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಬೆಂಗಳೂರು: ರಾಜ್ಯದಲ್ಲಿ ಅದಿಕಾರಕ್ಕೆ ಬಂದಿರುವ ಜೆಡಿಎಸ್-ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿ ಹಾಗೂ ತಮ್ಮ ಪಕ್ಷದ ಹಿರಿಯ ನಾಯಕರ ನಡವಳಿಕೆಯೂ ಸೇರಿದಂತೆ ಹಲವು ಕಾರಣಗಳಿಂದಾಗಿ ಅಸಮಾಧಾನದ ಗೂಡಾಗಿರುವ ಕಾಂಗ್ರೆಸ್ ಶಾಸಕರು ಅಕ್ರೋಶ ಸ್ಫೋಟಕ್ಕೆ ವೇದಿಕೆಯಾಗಲಿದೆ ಎಂದು ಹೇಳಲಾಗುತ್ತಿರುವ ಕಾಂಗ್ರೆಸ್ ಶಾಸಕಾಂಗ ಸಭೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ನಡೆಯಲಿದೆ. 
ಎಲ್ಲರ ಗಮನ ಸೆಳೆಯುತ್ತಿರುವ ಈ ಶಾಸಕಾಂಗ ಸಭೆಯಲ್ಲಿ ಶಾಸಕರು ನೇರನೇರ ತಮ್ಮ ತಮ್ಮ ಅಸಮಾಧಾನವನ್ನು ಹೊರಹಾಕಲಿದ್ದು, ಹೀಗಾಗಿ ಆಹ್ವಾನಿತರಾಗಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಭೆಗೆ ಗೈರು ಹಾಜರಾಗಲಿದ್ದಾರೆಂದು ಹೇಳಲಾಗುತ್ತಿದೆ. 
ಮೂಲಗಳ ಪ್ರಕಾರ ಹಿರಿಯ ಶಾಸಕರಾದ ರಾಮಲಿಂಗಾ ರೆಡ್ಡಿ, ರೋಷನ್ ಬೇಕ್ ನೇತೃತ್ವದಲ್ಲಿಯೂ 5-6 ಮಂದಿ ಶಾಸಕರು ಸಭೆಗೆ ಗೈರು ಹಾಜರಾಗಲಿದ್ದಾರೆಂದು ಹೇಳಲಾಗುತ್ತಿದೆ. ಈ ಮೂಲಕ ಬಂಡಾಯವನ್ನು ಬಹಿರಂಗವಾಗಿ ವ್ಯಕ್ತಪಡಿಸಲು ನಿರ್ಧರಿಸಿದ್ದಾರೆ. 
ಸರ್ಕಾರ ಹಾಗೂ ಪಕ್ಷದಲ್ಲಿ ಉತ್ತರ ಕರ್ನಾಟಕ ಭಾಗದ ಶಾಸಕರನ್ನು ನಿರ್ಲಕ್ಷಿಸಲಾಗುತ್ತಿದೆ ಎಂಬ ಅಸಮಾಧಾನವನ್ನು ಹೊಂದಿರುವ ದೊಡ್ಡ ಶಾಸಕರ ಗುಂಪೊಂದು ಸತೀಶ್ ಜಾರಕಿಕೊಳಿ ಹಾಗೂ ಎಂ.ಬಿ.ಪಾಟಡೀಲ್ ನೇತೃತ್ವದಲ್ಲಿ ಒಗ್ಗೂಡಿದೆ. ಈ ಗುಂಪು ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ವಿಚಾರವನ್ನು ದೊಡ್ಡ ಧ್ವನಿಯಲ್ಲಿ ಪ್ರಸ್ತಾಪಿಸಲಿದೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com