ಲೋಕಸಭೆ ಚುನಾವಣೆ ಸೀಟು ಹಂಚಿಕೆ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ: ದಿನೇಶ್ ಗುಂಡೂರಾವ್

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಜೆಡಿಎಸ್ ಗೆ ಸೀಟು ಹಂಚುವ ಕುರಿತ ಸಂಬಂಧ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ...
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್
Updated on: 
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಜೆಡಿಎಸ್ ಗೆ ಸೀಟು ಹಂಚುವ ಕುರಿತ ಸಂಬಂಧ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್ 22 ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ, ಆದರೆ ಬಿಜೆಪಿ ಯವರು ನಿರೀಕ್ಷಿಸುತ್ತಿರುವ ಹಾಗೆ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ , ಸರ್ಕಾರ ಸ್ಥಿರವಾಗಿರುತ್ತದೆ ಎಂದು ತಿಳಿಸಿದ್ದಾರೆ.
ಸಂಪುಟ ವಿಸ್ತರಣೆಯಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು, ಆದರೆ ಎಲ್ಲಾ ಆಕಾಂಕ್ಷಿಗಳಿಗೂ ಸಂಪುಟದಲ್ಲಿ ಸ್ಥಾನ ನೀಡಲು ಸಾಧ್ಯವಿಲ್ಲ ಎಂಬುದನ್ನು ಅರ್ಥಮಾಡಿಕೊಳ್ಳೂಬೇಕು ಎಂದು ಹೇಳಿದ್ದಾರೆ. 
ಕಾಂಗ್ರೆಸ್ ನಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು ದಿನೇಶ್ ಗುಂಡೂರಾವ್ ಸಮರ್ಥಿಸಿಕೊಂಡಿದ್ದಾರೆ,
ಇನ್ನೂ ಇದೇ ವೇಳೆ ಸಂಪುಟ ವಿಸ್ತರಣೆಯಲ್ಲಿ ಹಾಗೂ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಸ್ಥಾನ ನೀಡಬೇಕು ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com