ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಇನ್ನೂ ಕಾಲ ಕೂಡಿ ಬಂದಿಲ್ಲ, ಆದರೆ ಕಾಂಗ್ರೆಸ್ ಪಾಳಯದಲ್ಲಿ ಮುಂದಿನ ಲೋಕಸಭೆ ಚುನಾವಣೆಗೆ ತಯಾರಿಗಳು ಭರದಿಂದ ಸಾಗಿದೆ. ಸದ್ಯ ಬಿಜೆಪಿ ಸಂಸದರು ಪ್ರಬಲವಾಗಿರುವ ಕೆಲ ಕ್ಷೇತ್ರಗಳಲ್ಲಿ ಕೆಲವು ಹಿರಿಯ ಕ್ಯಾಬಿನೆಟ್ ಮಂತ್ರಿಗಳನ್ನು ಚುನಾವಣಾ ಕಣಕ್ಕಿಳಿಸುವ ಆಲೋಚನೆ ಇದೆ. ರಾಜ್ಯ ಕಾಂಗ್ರೆಸ್ ನಾಯಕರು ಈ ಸಂಬಂಧ ಪಕ್ಷದ ಹೈಕಮಾಂಡ್ ಒಪ್ಪಿಗೆಯನ್ನು ಕೇಳಲಿದ್ದಾರೆ ಎನ್ನಲಾಗಿದೆ.