ಕೈ ತಪ್ಪಿದ ಸಚಿವ ಸ್ಥಾನ: ಕಾಂಗ್ರೆಸ್ ಹೈ ಕಮಾಂಡ್ ವಿರುದ್ಧ ಬಿ.ಸಿ. ಪಾಟೀಲ್ ಪುತ್ರಿ ಅಸಮಾಧಾನ

ಅರ್ಹತೆ ಇದ್ದರೂ ತಮ್ಮ ತಂದೆಗೆ ಸಚಿವ ಸ್ಥಾನ ತಪ್ಪಿದ್ದಕ್ಕೆ ಹೈಕಮಾಂಡ್ ವಿರುದ್ಧ ಶಾಸಕ ಬಿ.ಸಿ ಪಾಟೀಲ್ ಪುತ್ರಿ ಸೃಷ್ಠಿ ಪಾಟೀಲ್ ಟ್ವೀಟ್ ಮಾಡಿ ಆಕ್ರೋಶ
ಬಿಸಿ ವಾಟೀಲ್ ಮತ್ತು ಸೃಷ್ಟಿ ಪಾಟೀಲ್
ಬಿಸಿ ವಾಟೀಲ್ ಮತ್ತು ಸೃಷ್ಟಿ ಪಾಟೀಲ್
ಬೆಂಗಳೂರು: ಅರ್ಹತೆ ಇದ್ದರೂ ತಮ್ಮ ತಂದೆಗೆ ಸಚಿವ ಸ್ಥಾನ ತಪ್ಪಿದ್ದಕ್ಕೆ ಹೈಕಮಾಂಡ್ ವಿರುದ್ಧ ಶಾಸಕ ಬಿ.ಸಿ ಪಾಟೀಲ್ ಪುತ್ರಿ ಸೃಷ್ಠಿ ಪಾಟೀಲ್ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮ್ಮ ತಂದೆಗೆ ಸಚಿವ ಸ್ಥಾನ ಕೊಡದೇ ಇರುವುದು ಅವರಿಗೆ ಮಾಡಿದ ದೊಡ್ಡ ಅನ್ಯಾಯ. ಹಿರೇಕೆರೂರು-ರಟ್ಟೇಹಳ್ಳಿ ತಾಲೂಕಿಗೆ ಮಾಡಿದ ದೊಡ್ಡ ಅನ್ಯಾಯ. ಬಿಸಿ ಪಾಟೀಲ್‍ಗೆ ಸಚಿವ ಸ್ಥಾನದ ಅರ್ಹತೆ ಇದ್ದರೂ ಕಾಂಗ್ರೆಸ್ ಸ್ಥಾನ ನೀಡಿಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಬಿಸಿ ಪಾಟೀಲ್ ಪುತ್ರಿ ಸೃಷ್ಠಿ ಪಾಟೀಲ್ ಟ್ವಿಟ್ಟರ್ ನಲ್ಲಿ ಕಿಡಿ ಕಾರಿದ್ದಾರೆ.
ಅಪ್ಪನಿಗೆ ಸಚಿವರಾಗುವ ಎಲ್ಲಾ ಅರ್ಹತೆ ಇದೆ. ಮೂರು ಬಾರಿ ಶಾಸಕರಾಗಿದ್ದಾರೆ, ಪಕ್ಷನಿಷ್ಠೆ ತೋರಿದ್ದಾರೆ. ಇಡೀ ಹಾವೇರಿ ಜಿಲ್ಲೆಗೆ ಬಿ.ಸಿ ಪಾಟೀಲ್ ಅವರು ಏಕೈಕ ಕಾಂಗ್ರೆಸ್ ನಾಯಕ, ಅಲ್ಲದೆ ಕಳೆದ 38 ವರ್ಷಗಳಿಂದ ಹಿರೇಕೆರೂರು ತಾಲೂಕಿಗೆ ಒಂದೇ ಒಂದು ಸಚಿವ ಸ್ಥಾನ ಸಿಕ್ಕಿಲ್ಲ. ಹೀಗೆ ಮಾಡಿದರೆ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳು ಹೇಗೆ ನಡೆಯುತ್ತವೆ ಎಂದು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಜಿಲ್ಲೆಯ ಅಭಿವೃದ್ಧಿಗಾಗಿ ಪಾಟೀಲ್ ಅವರಿಗೆ ಸ್ಥಾನ ನೀಡುವಂತೆ ಕಾಂಗ್ರೆಸ್ ನಾಯಕರಲ್ಲಿ ಕೇಳಿದ್ದೇವು, ಪಕ್ಷದ ಒಳಗೆ ಏನು ನಡೆಯುತ್ತಿದೆ ಎಂದು ಗೊತ್ತಿಲ್ಲ. ಯಾಕೆ ಅರ್ಹತೆ ಇರುವವರಿಗೆ ಅಧಿಕಾರ ಕೊಡುತ್ತಿಲ್ಲ ಅಂತಾ ಅರ್ಥವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com