ಸರ್ಕಾರದಲ್ಲಿ ಅಸಮಾಧಾನ ಭುಗಿಲೇಳುವುದು ಖಚಿತ, ಕಾದು ನೋಡುತ್ತೇವೆ: ಸಂಪುಟ ವಿಸ್ತರಣೆ ಕುರಿತು ಬಿಜೆಪಿ

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮೈತ್ರಿ ಕೂಡ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಿಂದ ಸರ್ಕಾರದಲ್ಲಿ ಅಸಮಾಧಾನ ಭುಗಿಲೇಳುವುದು ಖಚಿತ. ಸರ್ಕಾರದಲ್ಲಾಗುವ ಆಗುಹೋಗುಗಳನ್ನು ಕಾದು ನೋಡುತ್ತೇವೆಂದು...
ಯಡಿಯೂರಪ್ಪ
ಯಡಿಯೂರಪ್ಪ
Updated on: 
ಹುಬ್ಬಳ್ಳಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮೈತ್ರಿ ಕೂಡ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಿಂದ ಸರ್ಕಾರದಲ್ಲಿ ಅಸಮಾಧಾನ ಭುಗಿಲೇಳುವುದು ಖಚಿತ. ಸರ್ಕಾರದಲ್ಲಾಗುವ ಆಗುಹೋಗುಗಳನ್ನು ಕಾದು ನೋಡುತ್ತೇವೆಂದು ಬಿಜೆಪಿ ರಾಷ್ಟ್ರಾಧ್ಯಾಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ. 
ಕಾಂಗ್ರೆಸ್ ಪಕ್ಷದ ಸಂಪುಟ ವಿಸ್ತರಣೆ ಕುರಿತಂತೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಚಿವ ಸಂಪುಟ ವಿಸ್ತರಣೆ ಹಿನ್ನಲೆ ಕಾಂಗ್ರೆಸ್ ಮತ್ತು ಜೆಡಿಎಸ್ ನಲ್ಲಿ ಅಸಮಾಧಾನ ಭುಗಿಲೇಳಲಿದೆ.ಸಾಕಷ್ಟು ಬದಲಾವಣೆಗಳು ಆಗಲಿವೆ. ಕಾಂಗ್ರೆಸ್ ನಲ್ಲಿ ಅತೃಪ್ತಿ ತಾಂಡವವಾಡುತ್ತಿದೆ. ಮೈತ್ರಿಕೂಟ ಸರ್ಕಾರದಲ್ಲಿ ಎರಡೂ ಪಕ್ಷಗಳಲ್ಲಿ ಅಧಿಕಾರಕ್ಕಾಗಿ ಕಿತ್ತಾಟ ಜೋರಾಗಿದೆ. ಸಚಿವ ರಮೇಶ್ ಜಾರಕಿಹೊಳಿಯವರನ್ನು ಸಂಪುಟದಿಂದ ಕೈಬಿಟ್ಟಿದ್ದು, ಸಾಕಷ್ಟು ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ. 
ಕಳೆದ ಮೂರು ತಿಂಗಳಿಂದ ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳುತ್ತಾ ಮೈತ್ರಿ ಸರ್ಕಾರ ಕಾಲಹರಣ ಮಾಡಿದೆ. ಬಿಜೆಪಿ 104 ಜನ ಶಾಸಕರು ವಿರೋಧ ಪಕ್ಷದಲ್ಲಿದ್ದುಕೊಂಡು ಕೆಲಸ ಮಾಡುತ್ತಿದ್ದೇವೆ. ಮೈತ್ರಿ ಸರ್ಕಾರದಲ್ಲಿನ ಅಸಮಾಧಾನ ಭುಗಿಲೆದ್ದ ಬಳಿಕ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕರೆಯುತ್ತೇನೆ. ಸಭೆಯಲ್ಲಿ ಮುಂದಿನ ನಡೆಯ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆಂದು ತಿಳಿಸಿದ್ದಾರೆ. 
ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರೈತರ ಸಾಲಮನ್ನಾ ಎಂದು ಹೇಳುತ್ತಾರೆ. ರೈತರಿಗೆ ಟೋಪಿ ಹಾಕುತ್ತಾ ಬಂದಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ದೋಷ ಎತ್ತಿ ತೋರಿಸಿದ್ದೇವೆಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com