ರಾಮಲಿಂಗಾ ರೆಡ್ಡಿಗೆ ಸಚಿವ ಸ್ಥಾನ ನೀಡದಿದ್ದರೆ ರಾಜೀನಾಮೆ: ಮೇಯರ್ ಗಂಗಾಂಬಿಕೆ

ಕಾಂಗ್ರೆಸ್‌ನ ಹಿರಿಯ ನಾಯಕರಾಗಿರುವ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಕೂಡ ಸಿದ್ಧ ಎಂದು ಮೇಯರ್‌ ...
ರಾಮಲಿಂಗಾ ರೆಡ್ಡಿ
ರಾಮಲಿಂಗಾ ರೆಡ್ಡಿ
Updated on
ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ನಾಯಕರಾಗಿರುವ ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಕೂಡ ಸಿದ್ಧ ಎಂದು ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ಎಚ್ಚರಿಕೆ ನೀಡಿದ್ದಾರೆ. 
ರಾಮಲಿಂಗಾರೆಡ್ಡಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್‌ನ ಬಿಬಿಎಂಪಿ ಸದಸ್ಯರು ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. 
ಕುಮಾರಕೃಪಾ ಅತಿಥಿ ಗೃಹದಲ್ಲಿ ತಂಗಿದ್ದ ವೇಣುಗೋಪಾಲ್‌ ಅವರನ್ನು ಮೇಯರ್‌ ಗಂಗಾಂಬಿಕೆ, ಮಾಜಿ ಮೇಯರ್‌ಗಳಾದ ಜಿ.ಪದ್ಮಾವತಿ, ಮಂಜುನಾಥ್‌ರೆಡ್ಡಿ ಸೇರಿ ರಾಮಲಿಂಗಾರೆಡ್ಡಿ ಪರ ವಹಿಸಿರುವ ಕಾರ್ಪೊರೇಟರ್‌ಗಳು ಭೇಟಿಯಾದರು. 
ರಾಮಲಿಂಗಾರೆಡ್ಡಿ ಅನುಭವ ಹಾಗೂ ಹಿರಿತನ ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದರು. ಲೋಕಸಭೆ ಚುನಾವಣೆ ನಂತರ ಸಂಪುಟ ಪುನಾರಚನೆಯಾಗಲಿದ್ದು,  ಆಗ ಅವಕಾಶ ನೀಡುವುದಾಗಿ ವೇಣುಗೋಪಾಲ್ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com