ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೊಡನೆ ಸೀಟು ಹಂಚಿಕೆ ಕುರಿತಂತೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಸೀಟು ಹಂಚಿಕೆ ಕುರಿತು ಕಾಂಗ್ರೆಸ್ ನೊಡನೆ ಯಾವುದೇ ಚರ್ಚೆ ನಡೆಸಿಲ್ಲ. ಎಂದು ಮಾದ್ಯಮದವರ ಪ್ರಶ್ನೆಯೊಂದಕ್ಕೆ ಕುಮಾರಸ್ವಾಮಿ ಉತ್ತರಿಸಿದ್ದಾರೆ. ಆದರೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬಲವಾಗಿದ್ದು ಲೋಕಸಭೆಯಲ್ಲಿ ಎರಡೂ ಪಕ್ಷಗಳು ಜಂಟಿ ಹೋರಾಟ ನಡೆಸಲಿದೆ ಎಂದು ಅವರು ಹೇಳಿದ್ದಾರೆ.
ಕಾಂಗ್ರೆಸ್-ಜನತಾ ದಳ (ಜಾತ್ಯಾತೀತ)ಸಮ್ಮಿಶ್ರ ಸರ್ಕಾರದ ಸಹಕಾರ ಸಮಿತಿಯ ನಾಯಕರಾದ ಸಿದ್ದರಾಮಯ್ಯ, ಹೊಸದಾಗಿ ನೇಮಕಗೊಂಡ ಸಚಿವರಿಗೆ ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ತನ್ನ ಹಾಗೂ ಪರಮೇಶ್ವರ ನಡುವೆ ಯಾವುದೇ ಮನಸ್ತಾಪವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಹಿರಿಯ ಬಿಜೆಪಿ ಶಾಸಕ ಉಮೇಶ್ ಕತ್ತಿ ಕಾಂಗ್ರೆಸ್ ನ 15 ಮಂದಿ ಅಸಂತೃಪ್ತ ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆಮುಂದಿನ ವಾರದಲ್ಲಿ ಕೇಸರಿ ಪಕ್ಷ ಕರ್ನಾಟಕದಲ್ಲಿ ಹೊಸ ಸರ್ಕಾರ ರಚನೆ ಮಾಡಲಿದೆ ಎಂದು ಹೇಳಿಕೆ ನೀಡಿದ್ದರು.ಇದಕ್ಕೆ ಪ್ರತಿಕ್ರಯಿಸಿದ ಸಿದ್ದರಾಮಯ್ಯ "ಅವರು (ಬಿಜೆಪಿ) ವಿರೋಧ ಪಕ್ಷವಾಗಿರಲು ಬಯಸುವುದಿಲ್ಲ.ಹೀಗಾಗಿ ಅವರು ಕೆಟ್ಟ ಮಾರ್ಗದ ಮೂಲಕ ಸರ್ಕಾರ ರಚನೆಗೆ ಪ್ರಯತ್ನಿಸುತ್ತಿದ್ದಾರೆ" ಎಂದು ಹೇಳಿದ್ದಾರೆ