ಯಡಿಯೂರಪ್ಪ ಹಾಗೂ ಅಮಿತ್ ಶಾ ಅವರ ಭೇಟಿ ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿತ್ತು. ಶಾ ಅವರೊಂದಿಗೆ 10 ನಿಮಿಷಗಳ ಕಾಲ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಅಮಿತ್ ಶಾ ಅವರೊಂದಿಗೆ ರಾಜ್ಯ ರಾಜಕೀಯದ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ. ಜ.11 ಮತ್ತು 12ರಂದು ನಡೆಯಲಿರುವ ರಾಷ್ಟ್ರೀಯ ಕಾರ್ಯಕಾರಿಣಿಗೆ ಸಂಬಂಧಿಸಿದಂತೆ ಕೆಲವು ಮಾಹಿತಿಗಳನ್ನು ಅವರಿಗೆ ನೀಡಿದ್ದೇನಂದು ಹೇಳಿದರು.