ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತಮ್ಮಣ್ಣ, 'ಆನೆ ನಡೆದುಕೊಂಡು ಹೋಗುತ್ತಿದ್ದರೆ, ಮುದಿನಾಯಿಯೊಂದು ಆನೆ ಈಗ ಬೀಳುತ್ತೆ, ಆಗ ಬೀಳುತ್ತೆ ಎಂದು ಕಾಯುತ್ತ ಕುಳಿತ ಹಾಗೇ ರಾಜ್ಯ ಬಿಜೆಪಿ ಮುಖಂಡರು ಸರ್ಕಾರ ಆಗ ಬೀಳುತ್ತೆ, ಈಗ ಬೀಳುತ್ತೆ ಎಂದು ಕಾದು ಕುಳಿತಿದ್ದಾರೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.