ಲೋಕ ಮೈತ್ರಿಗೆ ಗೌಡರ ಷರತ್ತು: ಪಕ್ಷದ ನಿರ್ಧಾರಕ್ಕೆ ನಾವೆಲ್ಲರೂ ತಲೆ ಬಾಗಿದ್ದೇವೆ ಎಂದ ಖರ್ಗೆ

ಲೋಕಸಭಾ ಚುನಾವಣೆ 2019ಕ್ಕೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬಗ್ಗೆ ಈ ವರೆಗೂ ಯಾವುದೇ ರೀತಿಯ ಚರ್ಚೆಗಳಾಗಿಲ್ಲ. ಪ್ರಜಾಪ್ರಭುತ್ವದ ಒಳಿತಿಗಾಗಿ ನಾವೆಲ್ಲರೂ ಒಂದಾಗಬೇಕಿದೆ. ಈ ವಿಚಾರದಲ್ಲಿ ಹೈ ಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆಂದು...
ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ
ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು: ಲೋಕಸಭಾ ಚುನಾವಣೆ 2019ಕ್ಕೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬಗ್ಗೆ ಈ ವರೆಗೂ ಯಾವುದೇ ರೀತಿಯ ಚರ್ಚೆಗಳಾಗಿಲ್ಲ. ಪ್ರಜಾಪ್ರಭುತ್ವದ ಒಳಿತಿಗಾಗಿ ನಾವೆಲ್ಲರೂ ಒಂದಾಗಬೇಕಿದೆ. ಈ ವಿಚಾರದಲ್ಲಿ ಹೈ ಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಹೇಳಿದ್ದಾರೆ. 
ಸುದ್ದಿಗೋಷ್ಠಿಯಲ್ಲಿ ಲೋಕಸಭಾ ಚುನಾವಣೆಯಲ್ಲಿ 12 ಸ್ಥಾನ ಬಿಟ್ಟುಕೊಡುವಂತೆ ಜೆಡಿಎಸ್ ಪಟ್ಟು ಹಿಡಿಯುವ ಸಾಧ್ಯತೆ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕುರಿತು ಯಾವುದೇ ರೀತಿಯ ಚರ್ಚೆ ನಡೆದಿಲ್ಲ. ನಡೆದಾಗ ನೋಡೋಣ ಎಂದು ಹೇಳಿದ್ದಾರೆ. 
ರಾಜ್ಯದ ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್-ಜೆಡಿಎಸ್ ಎರಡೂ ಇದೆ. ಅವರ ನಿಲುವನ್ನು ಅವರು ತಿಳಿಸಿದ್ದಾರೆ. ಅದರಲ್ಲಿ ಯಾವುದೇ ತಪ್ಪೂ ಇಲ್ಲ. ಆದರೆ, ಅವರು ಕೇಳಿದ ಮಾತ್ರಕ್ಕೆ ನಾವು ಮಾತನಾಡುವುದು ಸರಿಯಲ್ಲ. ಅದಕ್ಕೆಲ್ಲಾ ಹೈಕಮಾಂಡ್ ಇದೆ. ದೆಹಲಿ ಮಟ್ಟದಲ್ಲಿ ಚರ್ಚೆ ನಡೆದ ಬಳಿಕ ಯಾರಿಗೆ ಎಷ್ಟು ಸೀಟು, ಯಾವ ಕ್ಷೇತ್ರ ಎಂಬ ಮಾಹಿತಿ ಹೊರ ಬೀಳುತ್ತದೆ. ಪ್ರಜಾಪ್ರಭುತ್ವದ ಒಳಿತಿಗಾಗಿ ನಾವೆಲ್ಲಾ ಒಂದಾಗಬೇಕಿದೆ. ಈ ವಿಚಾರದಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com