ಶೀಘ್ರದಲ್ಲೇ ಕಾಂಗ್ರೆಸ್ ನಾಯಕ ಹೆಚ್.ಆರ್. ಗವಿಯಪ್ಪ ಬಿಜೆಪಿಗೆ ಸೇರ್ಪಡೆ
ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ವಿಜಯನಗರ ಕ್ಷೇತ್ರದ ರಾಜಕೀಯ ಬೆಳವಣಿಗೆ ದಿನೇದಿನೇ ಬದಲಾಕುತ್ತಿದ್ದು. ತೀವ್ರ ಕುತೂಹಲವನ್ನು ಮೂಡಿಸುತ್ತಿದೆ. ಹೊಸಪೇಟೆ ಮಾಜಿ ಶಾಸಕ ಆನಂತ್ ಸಿಂಗ್ ಅವರನ್ನು ತಮ್ಮ ತೋಳಿನಲ್ಲಿ ಬಂಧಿಸಿಕೊಳ್ಳುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದ್ದು...
ಬಳ್ಳಾರಿ; ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ವಿಜಯನಗರ ಕ್ಷೇತ್ರದ ರಾಜಕೀಯ ಬೆಳವಣಿಗೆ ದಿನೇದಿನೇ ಬದಲಾಕುತ್ತಿದ್ದು. ತೀವ್ರ ಕುತೂಹಲವನ್ನು ಮೂಡಿಸುತ್ತಿದೆ. ಹೊಸಪೇಟೆ ಮಾಜಿ ಶಾಸಕ ಆನಂತ್ ಸಿಂಗ್ ಅವರನ್ನು ತಮ್ಮ ತೋಳಿನಲ್ಲಿ ಬಂಧಿಸಿಕೊಳ್ಳುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದ್ದು, ಈ ನಡುವೆ ಹೆಚ್.ಆರ್. ಗವಿಯಪ್ಪ ಅವರು ಬಿಜೆಪಿಗೆ ಶೀಘ್ರದಲ್ಲಿಯೇ ಸೇರ್ಪಡೆಗೊಳ್ಳಲಿದ್ದಾರೆಂದು ಹೇಳಲಾಗುತ್ತಿದೆ.
ಬಿಜೆಪಿಯಿಂದ ಹಿರಾಳ್ ರಂಗನಗೌಡ ಗವಿಯಪ್ಪ ಅವರಿಗೆ ಈಗಾಗಲೇ ಗ್ರೀನ್ ಸಿಗ್ನಲ್ ಬಂದಿದ್ದು, ಶನಿವಾರ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್, ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಲು ನವದೆಹಲಿಗೆ ತೆರಳುತ್ತಿದ್ದಾರೆಂದು ಮೂಲಗಳು ಮಾಹಿತಿ ನೀಡಿವೆ.
ಹೊಸಪೇಟೆಯಲ್ಲಿ ಸ್ವತಂತ್ರ ಶಾಸಕರಾಗಿದ್ದ ಗವಿಯಪ್ಪ ಅವರು, ಎಸ್.ಎಂ.ಕೃಷ್ಣ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.