ಪ್ರಧಾನಿ ಮೋದಿ ಮೆಚ್ಚಿಸಲು ಹಿಂದಿಯಲ್ಲಿ ಮಾತನಾಡಿದ ಬಿಎಸ್'ವೈ

ಅರಮನೆ ಮೈದಾನದಲ್ಲಿ ಬಿಜೆಪಿ ಆಯೋಜಿಸಿದ್ದ ಪರಿವರ್ತನಾ ರ್ಯಾಲಿ ಸಮಾರೋಪ ಸಮಾರಂಭದಲ್ಲಿ ಕನ್ನಡಿಗರ ಮೆಚ್ಚಿಗೆ ಪಡೆಯಲು ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಕನ್ನಡದಲ್ಲಿ ಭಾಷಣ ಆರಂಭ ಮಾಡಿದ್ದರು. ಆದರೆ, ಮೋದಿಯವರನ್ನು ಮೆಚ್ಚಿಸಲು...
ಪರಿವರ್ತನಾ ರ್ಯಾಲಿಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ಮೋದಿಯವರನ್ನು ಗೌರವಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ
ಪರಿವರ್ತನಾ ರ್ಯಾಲಿಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ಮೋದಿಯವರನ್ನು ಗೌರವಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ
Updated on: 
ಬೆಂಗಳೂರು: ಅರಮನೆ ಮೈದಾನದಲ್ಲಿ ಬಿಜೆಪಿ ಆಯೋಜಿಸಿದ್ದ ಪರಿವರ್ತನಾ ರ್ಯಾಲಿ ಸಮಾರೋಪ ಸಮಾರಂಭದಲ್ಲಿ ಕನ್ನಡಿಗರ ಮೆಚ್ಚಿಗೆ ಪಡೆಯಲು ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಕನ್ನಡದಲ್ಲಿ ಭಾಷಣ ಆರಂಭ ಮಾಡಿದ್ದರು. ಆದರೆ, ಮೋದಿಯವರನ್ನು ಮೆಚ್ಚಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಹಿಂದಿಯಲ್ಲಿ ಭಾಷಣ ಮಾಡಿದ್ದಾರೆ. 
ಪರಿವರ್ತನಾ ರ್ಯಾಲಿಯ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ಮಿಷನ್ 150 ಕಾರ್ಯತಂತ್ರವನ್ನು ಹಿಡಿದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಬಂದ ಯಡಿಯೂರಪ್ಪ ಅವರು, ಇದ್ದಕ್ಕಿದ್ದಂತೆಯೇ ಹಿಂದಿಯಲ್ಲಿ ಮಾತನಾಡಲು ಆರಂಭಿಸಿದ್ದರು. 
ಹಿಂದಿಯಲ್ಲಿ ಮಾತನಾಡಿದ ಯಡಿಯೂರಪ್ಪ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕಾಂಗ್ರೆಸ್ ಮುಕ್ತ ಕರ್ನಾಟಕದ ಕನಸನ್ನು ನಾನು ನನಸು ಮಾಡುತ್ತೇನೆಂದು ಹೇಳಿದರು. 
ಬಳಿಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರೋಪ ಮಾಡಲು ಆರಂಭಿಸಿದ ಅವರು, ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸುವಲ್ಲಿ ಸರ್ಕಾರ ಯಡವಿದೆ. ಕಾಂಗ್ರೆಸ್ ಸರ್ಕಾರ ಮಾತಿಗೆ ತಪ್ಪಿದ ಸರ್ಕಾರವಾಗಿದೆ. ನೀರಾವರಿಗಾಗಿ ಪ್ರತೀವರ್ಷ ರೂ.10,000 ಕೋಟಿ ಖರ್ಚು ಮಾಡುವಲ್ಲಿ ಸರ್ಕಾರ ವಿಫಲವಾಗಿದೆ. ಕೇಂದ್ರ ಸರ್ಕಾರ ನೀಡಿರುವ ಅನುದಾನ ಬಳಕೆಯಲ್ಲಿ ಅಕ್ರಮಗಳು ನಡೆದಿವೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ತೀವ್ರವಾಗಿ ಹದಗೆಟ್ಟಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com