ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿ ಭಾಷಣ ಮಾಡಿ ಹೋದ ಬಳಿಕ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಟ್ವಿಟರ್ ಕೆಸರೆರಚಾಟ ಮುಂದುವರೆದಿದ್ದು, ಇಂದೂ ಕೂಡ ಪ್ರಧಾನಿ ಮೋದಿ ವಿರುದ್ಧ ಟ್ವಿಟರ್ ನಲ್ಲಿ ಕಿಡಿಕಾರಿರುವ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಹಲವು ಸವಾಲುಗಳನ್ನು ಎಸೆದಿದ್ದಾರೆ. ಈ ಪೈಕಿ ಪ್ರಮುಖವಾಗಿ ಮುಂಬರುವ ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕಳಂಕ ರಹಿತ ಸಿಎಂ ಅಭ್ಯರ್ಥಿಯನ್ನು ಘೋಷಣೆ ಮಾಡುವಂತೆ ಸವಾಲೆಸೆದಿದ್ದಾರೆ.