ಸರ್ಕಾರದ ವರ್ಗಾವಣೆ ಕ್ರಮದ ವಿರುದ್ಧ ಜಗದೀಶ್ ಶೆಟ್ಟರ್ ವಾಗ್ದಾಳಿ

ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಲ್ಲಿ ಇತ್ತೀಚೆಗಷ್ಟೇ ಮಾಡಲಾದ ವರ್ಗಾವಣೆ ಕ್ರಮದ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರು ಗುರುವಾರ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ...
ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್
ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್
Updated on: 
ಬೆಂಗಳೂರು: ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಲ್ಲಿ ಇತ್ತೀಚೆಗಷ್ಟೇ ಮಾಡಲಾದ ವರ್ಗಾವಣೆ ಕ್ರಮದ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಅವರು ಗುರುವಾರ ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. 
ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಳಿಕ ನಾಲ್ಕೂವರೆ ವರ್ಷದಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಆಯುಕ್ತರ ಸ್ಥಾನಕ್ಕೆ 19 ಜನರು ಬಂದಿದ್ದಾರೆಂದು ಹೇಳಲಾಗುತ್ತಿತ್ತು. 
ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿರುವ ಶೆಟ್ಟರ್ ಅವರು, ಸರ್ಕಾರದ ವರ್ಗಾವಣೆ ಕ್ರಮವನ್ನು ತೀವ್ರವಾಗಿ ಖಂಡಿಸಿದರು. ಸರ್ಕಾರ ತನ್ನ ದೃಷ್ಟಿಗಿಂತಲೂ ಸಾಧನೆಗಳ ಬಗ್ಗೆಯೇ ಹೆಚ್ಚು ಹೆಮ್ಮೆ ಪಡುತ್ತಿದೆ. ಇಲಾಖೆಯಲ್ಲಿ ಆಗಾಗ ಅಧಿಕಾರಿಗಳನ್ನು ವರ್ಗಾವಣೆ ಮಾಡುವುದು ಅವರ ಕರ್ತವ್ಯಕ್ಕೆ ಅಡ್ಡಿಪಡಿಸುವಂತಾಗುತ್ತದೆ ಎಂದು ಹೇಳಿದರು. 
ಅನ್ನ ಭಾಗ್ಯ ಯೋಜನೆಯನ್ನು ಕಾರ್ಯಗತಗೊಳಿಸುವಲ್ಲಿ ಹಾಗೂ ಜನರಿಗೆ ಪಡಿತರ ಚೀಟಿ ವಿತರಿಸುವಲ್ಲಿ ಇಲಾಖೆ ಬಹುಮುಖ್ಯ ಪಾತ್ರವನ್ನು ನಿಭಾಯಿಸುತ್ತದೆ. ಸರ್ಕಾರದ ವೈಖರಿ ಇದೆಯೇ? ಎಂದು ಪ್ರಶ್ನಿಸಿದ್ದಾರೆ. 
ಉತ್ತರಪ್ರದೇಶದಲ್ಲಿ ಸಾವನ್ನಪ್ಪಿದ್ದ ಐಎಎಸ್ ಅಧಿಕಾರಿ ಇಲಾಖೆಯಲ್ಲಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ತಿವಾರಿ ಪ್ರಾಮಾಣಿಕ ಅಧಿಕಾರಿಯಾಗಿದ್ದರು, ಇಲಾಖೆಯಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ಬಯಲಿಗೆಳೆಯುತ್ತಿದ್ದರು. ಪ್ರಕರಣವನ್ನು ಮತ್ತೊಮ್ಮೆ ತನಿಖೆ ನಡೆಸಿದರೆ, ಅವರ ಸಾವಿಗೆ ಕಾರಣ ಹಾಗೂ ಅವರ ಸಾವಿನ ಹಿಂದಿರುವ ವ್ಯಕ್ತಿಗಳ ಕುರಿತು ಮಾಹಿತಿ ಬಹಿರಂಗಗೊಳ್ಳಲಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com