ಈ ಸಂಬಂಧ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿರುವ ಎನ್ ಸಿಪಿ ಪ್ರಧಾನ ಕಾರ್ಯದರ್ಶಿ, ತಿಲಕ್ ಆರ್ ನಂಬಿಯಾರ್, ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಸಂಬಂಧ ಈಗಾಗಲೇ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದು, ಮುಂದಿನ ಸಾಧ್ಯಾಸಾಧ್ಯತೆಗಳ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ ಪಕ್ಷದಿಂದ ಯಾರು ಕಣಕ್ಕಿಳಿಯಲಿದ್ದಾರೆ ಎಂಬುದನ್ನು ಪಕ್ಷದ ಸರ್ವೋಚ್ಚ ನಾಯಕ ಶರದ್ ಪವಾರ್ ನಿರ್ಧರಿಸಲಿದ್ದಾರೆ ಎಂದು ತಿಳಿಸಿದ್ದಾರೆ.