ರಾಜಕೀಯ

ಮೋದಿಗೆ ನಿಜಕ್ಕೂ ಬಡವರ ಬಗ್ಗೆ ಕಾಳಜಿ ಇದ್ದರೆ ದೇಶಾದ್ಯಂತ 'ಇಂದಿರಾ ಕ್ಯಾಂಟೀನ್' ಆರಂಭಿಸಲಿ: ರಾಹುಲ್ ಗಾಂಧಿ

ಮೋದಿಗೆ ನಿಜಕ್ಕೂ ಬಡವರ ಬಗ್ಗೆ ಕಾಳಜಿ ಇದ್ದರೆ ದೇಶಾದ್ಯಂತ 'ಇಂದಿರಾ ಕ್ಯಾಂಟೀನ್' ಆರಂಭಿಸಲಿ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
Published On :
ರಾಯಚೂರು: ರಾಜ್ಯದಲ್ಲಿ ಬಡವರ ಪರ ಮತ್ತು ರೈತ ಪರವಾದ ಹಲವು ಯೋಜನೆಗಳನ್ನು ಜಾರಿಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನೋಡಿ ಪ್ರಧಾನಿ ನರೇಂದ್ರ ಮೋದಿ ಅವರು ಪಾಠ ಕಲಿಯಲಿ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸೋಮವಾರ ಹೇಳಿದ್ದಾರೆ.
ಕಾಂಗ್ರೆಸ್ ಜನಾಶೀರ್ವಾದ ಯಾತ್ರೆ ಇಂದು ರಾಯಚೂರು ಜಿಲ್ಲೆಯ ದೇವದುರ್ಗ ತಲುಪಿದ್ದು, ಪಟ್ಟಣದಲ್ಲಿ ಆಯೋಜಿಸಿದ್ದ ಪರಿಶಿಷ್ಟ ಪಂಗಡದ ಸಮಾವೇಶ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಬಡವರಿಗಾಗಿ ಇಂದಿರಾ ಕ್ಯಾಂಟೀನ್ ಆರಂಭಿಸಿದೆ. ಒಂದು ವೇಳೆ ನೀವು ಬಡವರ ಪರವಾಗಿದ್ದರೆ ಹಸಿದವರಿಗಾಗಿ ದೇಶದ ತುಂಬ 'ಇಂದಿರಾ ಕ್ಯಾಂಟಿನ್' ಆರಂಭಿಸಬೇಕು ಎಂದು ಪ್ರಧಾನಿ ಮೋದಿಗೆ ಸವಾಲು ಹಾಕಿದರು. 
ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಮೊದಲು ತಮ್ಮ ಎಡ-ಬಲ ನೋಡಿಕೊಳ್ಳಲಿ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಪುತ್ರ ಜಯ್ ಶಾ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಮೊದಲು ಉತ್ತರ ನೀಡಿ ಎಂದು ರಾಹುಲ್ ಆಗ್ರಹಿಸಿದರು.
50 ಸಾವಿರ ರುಪಾಯಿ ಇದ್ದ ಅಮಿತ್ ಶಾ ಪುತ್ರನ ಕಂಪನಿ ಕೇವಲ ಮೂರೇ ತಿಂಗಳಲ್ಲಿ 80 ಕೋಟಿ ರುಪಾಯಿ ವಹಿವಾಟು ನಡೆಸಿದ್ದು ಹೇಗೆ? ಇದನ್ನು ಸಹ ನೀವು ಈ ದೇಶದ ಜನತೆಗೆ ಹೇಳಬೇಕು ಎಂದರು.
ಪ್ರಧಾನಿ ಮೋದಿ ಅವರು ದೇಶದಲ್ಲಿ ಉದ್ಯೋಗ ಸೃಷ್ಟಿಸುವಲ್ಲಿ ಮತ್ತು ರೈತರ ಸಮಸ್ಯೆ ಪರಿಹರಿಸುವಲ್ಲಿ ಸಂಪೂರ್ಣ ವಿಫಲವಾಗಿಲ್ದಾದೆ. ಕರ್ನಾಟಕದಲ್ಲಿ ಮಾಡಿದ್ದಾರೆ. ದೇಶದಲ್ಲಿ ಪ್ರತಿವರ್ಷ 2 ಕೋಟಿ ಉದ್ಯೋಗ ಕೊಡುವ ಮಾತಿನಂತೆ ಮೋದಿ ನಡೆದುಕೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು.
ಪರಿಶಿಷ್ಟರ ಅಭಿವೃದ್ಧಿಗಾಗಿ ಸಿದ್ದರಾಮಯ್ಯ 27,700 ಕೋಟಿ ಅನುದಾನ ಕೊಟ್ಟಿದ್ದಾರೆ. ಕೇಂದ್ರ ಸರ್ಕಾರ ಇಡೀ ದೇಶಕ್ಕೆ 54 ಸಾವಿರ ಕೋಟಿ ನೀಡಿದೆ. ಕೇಂದ್ರದ ಒಟ್ಟು ಅನುದಾನದಲ್ಲಿ ಶೇ 50ರಷ್ಟು ಕರ್ನಾಟಕ ಒಂದೇ ರಾಜ್ಯ ನೀಡಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.