ಈ ಬಗ್ಗೆ ನಿನ್ನೆ ಟ್ವೀಟ್ ಮಾಡಿರುವ ಬಿಎಸ್ ಯಡಿಯೂರಪ್ಪ ಅವರು, ಪತ್ರಿಕೆಗಳ ಎರಡು ವರದಿಗಳನ್ನು ಹಿನ್ನಲೆಯಾಗಿಸಿಕೊಂಡು ಟ್ವೀಟ್ ಮಾಡಿದ್ದು, ಜವಾರಿ ಕೋಳಿ ತಿಂದು ನರಸಿಂಹ ಸ್ವಾಮಿ ದರ್ಶನ ಪಡೆಯೋ ರಾಹುಲ್ 'ಎಲೆಕ್ಷನ್ ಹಿಂದೂ' ಎಂದು ಕಿಡಿಕಾರಿದ್ದಾರೆ. ಅಂತೆಯೇ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧವೂ ಹರಿಹಾಯ್ದಿರುವ ಬಿಎಸ್ ವೈ, ಮೀನು ತಿಂದು ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪ್ರತಿ ಬಾರಿ ಏಕೆ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.