ಜೆಡಿಎಸ್ ಪರ ಮುಲಾಯಂ ಪ್ರಚಾರ! ಅಂಬೇಡ್ಕರ್ ಮೊಮ್ಮಗ, ಫರೂಖ್ ಅಬ್ದುಲ್ಲಾ ಗೆ ಗಾಳ?

ಮುಂಬರುವ ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ದಲಿತ ಮತಗಳ ಮೇಲೆ ಕಣ್ಣಿಟ್ಟಿರುವ ಜೆಡಿಎಸ್ ಸರ್ವೋಚ್ಚ ನಾಯಕ ಎಚ್,ಡಿ ದೇವೇಗೌಡ ದಲಿತರನ್ನು...
ಮುಲಾಯಂ ಸಿಂಗ್ ಯಾದವ್
ಮುಲಾಯಂ ಸಿಂಗ್ ಯಾದವ್
Updated on: 
ಬೆಂಗಳೂರು: ಮುಂಬರುವ ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ದಲಿತ ಮತಗಳ ಮೇಲೆ ಕಣ್ಣಿಟ್ಟಿರುವ ಜೆಡಿಎಸ್ ಸರ್ವೋಚ್ಚ ನಾಯಕ ಎಚ್,ಡಿ ದೇವೇಗೌಡ ದಲಿತರನ್ನು ಓಲೈಸಲು ಈಗಾಗಲೇ ಬಿಎಸ್ಪಿ ನಾಯಕಿ ಮಾಯಾವತಿ ಜೊತೆ ಚುನಾವಣೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ.
ಇದೇ ವೇಳೆ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಜೊತೆ ಕೂಡ ದೇವೇಗೌಡರು ಮಾತುಕತೆ ನಡೆಸಿದ್ದಾರೆ,  ಜೆಡಿಎಸ್ ಪರ ಚುನಾವಣಾ ಪ್ರಚಾರ ನಡೆಸಲು ಮುಲಾಯಂ ಸಿಂಗ್ ಜೊತೆ ಚರ್ಚೆ ನಡೆಸಿ ಪ್ರಚಾರಕ್ಕೆ ಬಹುವಂತೆ ಆಹ್ವಾನಿಸಿದ್ದು, ಅವರ ಪ್ರತಿಕ್ರಿಯೆಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ.
ಒಂದು ವೇಳೆ ಚುನಾವಣಾ ಪ್ರಚಾರಕ್ಕೆ ಬರಲು ಮುಲಾಯಂ ಸಿಂಗ್ ಒಪ್ಪಿದರೇ ಹಿಂದುಳಿದ ವರ್ಗಗಳ ಬೃಹತ್ ಮತಗಳನ್ನು  ಪಡೆಯಲು ಸಹಾಯವಾಗಲಿದೆ. ಮುಂದಿನ ಕೆಲ ದಿನಗಳಲ್ಲಿ ಈ ಸಂಬಂಧ ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಜೆಡಿಎಸ್ ಶಾಸಕ ರಮೇಶ್ ಬಾಬು ಹೇಳಿದ್ದಾರೆ.
ಪಿಜಿಆರ್ ಸಿಂಧ್ಯ ನೇತೃತ್ವದಲ್ಲಿ ಜೆಡಿಎಸ್ ಹಿಂದುಳಿದ ವರ್ಗಗಳ ಮುಖಂಡರ ರಾಜ್ಯ ಮಟ್ಟದ ಸಮಿತಿ ರಚಿಸಲಿದ್ದು, ಹಲವು ರ್ಯಾಲಿಗಳನ್ನು ನಡೆಸಲಿದೆ ಎಂದು ಹೇಳಿದ್ದಾರೆ. ಜೊತೆಗೆ ಜಮ್ಮು ಮತ್ತು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರುಖ್ ಅಬ್ದುಲ್ಲಾ  ಮತ್ತು ಡಾ. ಬಿ. ಆರ್ ಅಂಬೇಡ್ಕ್ ಅವರ ಮೊಮ್ಮಗನನ್ನು ಚುನಾವಣಾ ಪ್ರಚಾರಕ್ಕೆ ಕರೆ ತರಲು ಪ್ರಯತ್ನ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ, 
ಫೆಬ್ರವರಿ 17 ರಂದು ಯಲಹಂಕ ಬಳಿ ಜೆಡಿಎಸ್ ರ್ಯಾಲಿ ಏರ್ಪಡಿಸಿದ್ದು ಮಾಜಿ ಪ್ರಧಾನಿ ದೇವೇಗೌಡ ಮತ್ತು ಬಿಎಸ್ ಪಿ ನಾಯಕಿ ಮಾಯಾವತಿ ಭಾಗವಹಿಸಲಿದ್ದಾರೆ ಎಂದು ರಮೇಶ್ ಬಾಬು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com