ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಂಗಳವಾರ ಮಾತನಾಡಿದ ಅವರು, ''ರಾಹುಲ್ ಗಾಂಧಿಯವರು ಮಾಂಸ ಸೇವಿಸಿ ದೇವಾಲಯಕ್ಕೆ ಭೇಟಿ ಡಿದ್ದಾರೆಂದು ಯಡಿಯೂರಪ್ಪ ಹೇಳಿದ್ದಾರೆ. ಆಹಾರ ಸಂಸ್ಕೃತಿ ಎನ್ನುವುದು ವೈಯಕ್ತಿಕವಾದುದು. ಅಷ್ಟಕ್ಕೂ ಬಿಎಸ್‌ವೈ ಆರೋಪಿಸಿದಂತೆ ರಾಹುಲ್ ಅವರು ದೇವಾಲಯಕ್ಕೆ ಹೋಗುವ ಮೊದಲು ಮಾಂಸಾಹಾರ ಸೇವನೆ ಮಾಡಿರಲಿಲ್ಲ. ಈ ಬಗ್ಗೆ ರಾಹುಲ್ ಅವರೇ ಸ್ಪಷ್ಟ ಪಡಿಸಿದ್ದಾರೆ,'' ಎಂದು ತಿಳಿಸಿದ್ದಾರೆ.