ಪರೇಶ್ ಮೇಸ್ತಾ ಮನೆಯಲ್ಲಿ ಅಮಿತ್ ಶಾ
ರಾಜಕೀಯ
ಉತ್ತರ ಕನ್ನಡ: ಪರೇಶ್ ಮೇಸ್ತಾ ಮನೆಗೆ ಅಮಿತ್ ಶಾ ಭೇಟಿ, ಎನ್ ಐಎ ತನಿಖೆಗೆ ತಂದೆ ಒತ್ತಾಯ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಕಳೆದ ಡಿಸೆಂಬರ್ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ....
ಕಾರವಾರ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಕಳೆದ ಡಿಸೆಂಬರ್ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಪರೇಶಾ ಮೇಸ್ತಾ ನಿವಾಸಕ್ಕೆ ಬುಧವಾರ ಭೇಟಿ ಆತನ ಪೋಷಕರಿಗೆ ಸಾಂತ್ವನ ಹೇಳಿದರು.
ಇಂದು ಮಧ್ಯಾಹ್ನ ಹೊನ್ನಾವರದ ತುಳಸಿನಗರದಲ್ಲಿರುವ ಮೇಸ್ತಾ ಮನೆಗೆ ಆಗಮಿಸಿದ ಅಮಿತ್ ಶಾ, ಪರೇಶ್ ತಂದೆ ಕಮಲಾಕರ್ ಮೇಸ್ತಾ ಅವರ ಜತೆ ಸುಮಾರು 30 ನಿಮಿಷಗಳ ಕಾಲ ಮಾತುಕತೆ ನಡೆಸಿದರು.
ಈ ವೇಳೆ, ಪುತ್ರನ ಸಾವಿನ ಪ್ರಕರಣವನ್ನು ಸಿಬಿಐ ಬದಲಿಗೆ ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) ವಹಿಸುವಂತೆ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅಮಿತ್ ಶಾ, 'ಎನ್ಐಎ ತನಿಖೆಯ ಅಗತ್ಯವಿಲ್ಲ. ಬದಲಾಗಿ ಸಿಬಿಐನ ಎಸ್‌ಪಿ ಶ್ರೇಣಿಯ ಅಧಿಕಾರಿಯಿಂದ ತನಿಖೆ ಮಾಡಿಸಲಾಗುವುದು. ಆರೋಪಿಗಳಿಗೆ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಆದರೆ ಪರೇಶ್ ಸಹೋದರ ಅಥವಾ ಸಹೋದರಿಗೆ ನೌಕರಿ ಕೊಡುವ ಬಗ್ಗೆ ಪ್ರತಿಕ್ರಿಯಿಸಲಿಲ್ಲ ಎಂದು ಕಮಲಾಕರ್ ಮೇಸ್ತಾ ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ, ಜಿಲ್ಲಾ ಮಟ್ಟದ ಮುಖಂಡರು ಇದ್ದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ