ಜೆಡಿಎಸ್ ಅಧಿಕಾರಕ್ಕೆ ಬಂದರೇ ಬ್ರಾಹ್ಮಣರ ನಿಧಿಗೆ 100 ಕೋಟಿ ರು. ಅನುದಾನ: ಎಚ್.ಡಿಕೆ

ಮುಂದಿನ ವಿಧಾನಸಭೆ ಚುನಾವೆಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೇ ವಿಪ್ರ ನಿಧಿ ಸ್ಥಾಪಿಸಿ ರು. 100 ಕೋಟಿ ಅನುದಾನ ನೀಡುತ್ತೇವೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ...
ಎಚ್.ಡಿ ಕುಮಾರಸ್ವಾಮಿ
ಎಚ್.ಡಿ ಕುಮಾರಸ್ವಾಮಿ
Updated on
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವೆಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೇ ವಿಪ್ರ ನಿಧಿ ಸ್ಥಾಪಿಸಿ ರು. 100 ಕೋಟಿ ಅನುದಾನ ನೀಡುತ್ತೇವೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ವತಿಯಿಂದ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಬೆಂಗಳೂರು ಮಹಾನಗರ ವಿಪ್ರರ ಸಮಾವೇಶ’ದಲ್ಲಿ ಮಾತನಾಡಿದರು.ಬ್ರಾಹ್ಮಣ ಅಭಿವೃದ್ಧಿ ನಿಗಮ ಸ್ಥಾಪಿಸಿ, ರು.25 ಕೋಟಿ ಅನುದಾನ ಒದಗಿಸಬೇಕು. ಶಾಲಾ–ಕಾಲೇಜು ಸ್ಥಾಪನೆಗೆ 10 ಎಕರೆ ಭೂಮಿ ನೀಡಬೇಕು ಎಂಬ ಮನವಿಗೆ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದರು.
ಬ್ರಾಹ್ಮಣ ಅಭಿವೃದ್ಧಿ ನಿಗಮ ಸ್ಥಾಪಿಸುವುದಾಗಿ ಸರ್ಕಾರ ಹೇಳಿತ್ತು. ಆದರೆ, ಈ ಪ್ರಸ್ತಾವವನ್ನು ಕೈಬಿಟ್ಟಿದೆ ಎಂಬ ಮಾಹಿತಿ ಇದೆ. ಆದರೆ, ಸರ್ಕಾರವು ಎಲ್ಲ ಜನಾಂಗದವರನ್ನು ಗೌರವಿಸಬೇಕು ಎಂದು ಕುಮಾರಸ್ವಾಮಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com