ಯಡಿಯೂರಪ್ಪನವರ ಹಸಿರು ಶಾಲು ರೈತರ ರಕ್ತದಿಂದ ತೊಯ್ದಿದೆ: ರಾಮಲಿಂಗಾರೆಡ್ಡಿ

ಮಾಜಿ ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರರು ತಮ್ಮ ಚುನಾವಣಾ ಪ್ರಚಾರದಲ್ಲಿ ರೈತರನ್ನು ಟಾರ್ಗೆಟ್ ಮಾಡಿದ್ದಾರೆ. ...
ಯಡಿಯೂರಪ್ಪ ಮತ್ತು ರಾಮಲಿಂಗಾರೆಡ್ಡಿ
ಯಡಿಯೂರಪ್ಪ ಮತ್ತು ರಾಮಲಿಂಗಾರೆಡ್ಡಿ
Updated on: 
ಬೆಂಗಳೂರು: ಮಾಜಿ ಸಿಎಂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರರು ತಮ್ಮ ಚುನಾವಣಾ ಪ್ರಚಾರದಲ್ಲಿ ರೈತರನ್ನು ಟಾರ್ಗೆಟ್ ಮಾಡಿದ್ದಾರೆ. ಆದರೆ ಬಿಜೆಪಿಗೆ ರೈತರಿಂದ ಮತ ಕೇಳುವ ನೈತಿಕ ಹಕ್ಕಿಲ್ಲ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಸಿರು ಶಾಲು ಹೊದ್ದು ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದ ಯಡಿಯೂರಪ್ಪ, ಹಾವೇರಿಯಲ್ಲಿ ರೈತರ ಮೇಲೆ ಗೋಲಿಬಾರ್ ಮಾಡಿಸಿದ್ದರು. ಆ ಶಾಲಿಗೆ ಮೆತ್ತಿರುವ ರೈತರ ರಕ್ತದ ಕಲೆ ಇನ್ನೂ ಮಾಸಿಲ್ಲ ಎಂದು ದೂರಿದ್ದಾರೆ,
ರೈತರ ಸಾಲ ಮನ್ನಾ ಮಾಡಲು ನೋಟ್ ಮುದ್ರಿಸುವ ಯಂತ್ರ ಇಲ್ಲ ಎಂದು ಮುಖ್ಯಮಂತ್ರಿಯಾಗಿದ್ದ ಹೇಳಿದ್ದ ಯಡಿಯೂರಪ್ಪ, ಈಗ ರೈತ ಬಂಧು ಆಗಲು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com