ಲೋಕಸಭೆಯಲ್ಲಿ ಪ್ರತಿಧ್ವನಿಸಿದ ಮಹದಾಯಿ: ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಕಾಂಗ್ರೆಸ್ ಆಗ್ರಹ

ಮಹದಾಯಿ ವಿವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಕೂಡಲೇ ಮಧ್ಯಸ್ಥಿಕೆ ವಹಿಸಿ ಕರ್ನಾಟಕದ ಕುಡಿಯುವ ನೀರಿನ....
ಮಹದಾಯಿ ನದಿ
ಮಹದಾಯಿ ನದಿ
Updated on: 
ನವದೆಹಲಿ: ಮಹದಾಯಿ ವಿವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಕೂಡಲೇ ಮಧ್ಯಸ್ಥಿಕೆ ವಹಿಸಿ ಕರ್ನಾಟಕದ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಕಾಂಗ್ರೆಸ್ ಮಂಗಳವಾರ ಲೋಕಸಭೆಯಲ್ಲಿ ಆಗ್ರಹಿಸಿದೆ.
ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ ಅವರು, ರಾಜ್ಯದ ಜನ ವಿಶೇಷವಾಗಿ ಉತ್ತರ ಕರ್ನಾಟಕದ ಜನ ಕುಡಿಯುವ ನೀರಿಗಾಗಿ ಪರದಾಡುವಂತಹ ಸ್ಥಿತಿ ಇದೆ. ಜನರಿಗೆ ಕುಡಿಯುವ ನೀರು ಪೂರೈಸುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜವಾಬ್ದಾರಿ. ಕುಡಿಯುವ ನೀರಿಗಾಗಿ ಉತ್ತರ ಕರ್ನಾಟಕ ಜನರು ಪ್ರತಿಭಟನೆಗಳ ಮೇಲೆ ಪ್ರತಿಭಟನೆಗಳನ್ನು ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶಿಸಬೇಕೆಂದು ಒತ್ತಾಯಿಸಿದರು. 
ಕುಡಿಯುವ ನೀರಿನ ವಿಚಾರದಲ್ಲಿ ರಾಜಕೀಯವನ್ನು ಬಿಟ್ಟು ಮಹದಾಯಿ ಮತ್ತು ಮೇಕೆದಾಟು ಎರಡೂ ಯೋಜನೆಗಳ ಜಾರಿಗೆ ಪ್ರಧಾನಿ ಮಧ್ಯಪ್ರವೇಶ ಅಗತ್ಯ ಎಂದರು. 
ಇದಕ್ಕೆ ಪ್ರತಿಕ್ರಿಯಿಸಿದ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್ ಅವರು, ಮಹದಾಯಿ ವಿವಾದ ನ್ಯಾಯಾಧೀಕರಣದ ಹೊರಗೆ ಇತ್ಯಾರ್ಥಪಡಿಸಿಕೊಳ್ಳುವ ಸಂಬಂಧ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದು, ಅದರಂತೆ ಕರ್ನಾಟಕಕ್ಕೆ 7.35ಟಿಎಂಸಿ ನೀರು ಕೊಡಲು ಒಪ್ಪಿಗೆ ಸೂಚಿಸಿದ್ದಾರೆ ಎಂದರು.
ಅನಂತ್ ಕುಮಾರ್ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಸದಸ್ಯರು, ಗೋವಾ ಸಿಎಂ ಮಾಜಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು ಏಕೆ? ಎಂದು ಪ್ರಶ್ನಿಸಿದರು. ಬಳಿಕ ಆಡಳಿತ ಮತ್ತು ಪ್ರತಿಪಕ್ಷದ ಸದಸ್ಯರ ನಡುವೆ ಕೆಲ ಕಾಲ ವಾಗ್ವಾದ ನಡೆಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com