ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶತಾಯಗತಾಯ ಗೆಲುವು ಸಾಧಿಸಲೇಬೇಕು ಎಂದು ಪಣ ತೊಟ್ಟಂತಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷ, ಈಗಾಗಲೇ ತನ್ನ ಚುನಾವಣಾ ಸಿದ್ದತೆ ಆರಂಭಿಸಿದೆ. ಅದರಂತೆ ರಾಜ್ಯದ ಎಲ್ಲ ಕ್ಷೇತ್ರಗಳಿಗೂ ತನ್ನ ಚುನಾವಣಾ ವೀಕ್ಷಕರನ್ನು ನೇಮಕ ಮಾಡಲಿದ್ದು, ಯಾವ ಕ್ಷೇತ್ರದಲ್ಲಿ ಹಾಲಿ ಶಾಸಕರು ಕಾರ್ಯಕರ್ತರಿಂದ ಅಸಮಾಧಾನ ಎದುರಿಸುತ್ತಿದ್ದಾರೆ ಎಂಬ ಪಟ್ಟಿಯನ್ನು ತಯಾರು ಮಾಡಲು ಸೂಚನೆ ನೀಡಲಾಗಿದೆ.