ರಾಜ್ಯದಲ್ಲಿ ಕಲ್ಲಿದ್ದಲು ಕೊರತೆಗೆ ಕೇಂದ್ರ ಸರ್ಕಾರ ಕಾರಣ: ಡಿಕೆ ಶಿವಕುಮಾರ್

ರಾಜ್ಯದ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ದೊರಣೆ ಅನುಸರಿಸುತ್ತಿದೆ ಎಂದು ಆರೋಪಿಸಿರುವ ಇಂಧನ....
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್
ಬೆಂಗಳೂರು: ರಾಜ್ಯದ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ದೊರಣೆ ಅನುಸರಿಸುತ್ತಿದೆ ಎಂದು ಆರೋಪಿಸಿರುವ ಇಂಧನ ಸಚಿವ ಡಿ.ಕೆ. ಶಿವಕುಮಾರ್ ಅವರು, ಕರ್ನಾಟಕದಲ್ಲಿ ಕಲ್ಲಿದ್ದಲು ಕೊರತೆ ಉಂಟಾಗಲು ಕೇಂದ್ರ ಸರ್ಕಾರವೇ ಕಾರಣ ಎಂದು ಶುಕ್ರವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಡಿ ಕೆ ಶಿವಕುಮಾರ್, ಕಲ್ಲಿದ್ದಲು ಕೊರತೆಯ ನಡುವೆಯೂ ಬೇಸಿಗೆಯಲ್ಲಿ ವಿದ್ಯುತ್ ಅಭಾವ ಎದುರಾಗದಂತೆ ನೋಡಿಕೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಲೋಡ್‌ಶೆಡ್ಡಿಂಗ್ ಮಾಡುವುದಿಲ್ಲ ಎಂದು ಭರವಸೆ ನೀಡಿದರು.
ಇದೇ ವೇಳೆ ಕಲ್ಲಿದ್ದಲು ಪೂರೈಕೆ ವಿಷಯ ಚರ್ಚಿಸಿಲ್ಲ ಎಂಬ ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ಕಲ್ಲಿದ್ದಲು ಹಂಚಿಕೆಯಲ್ಲಿ ಕೇಂದ್ರ ತಾರತಮ್ಯ ಮಾಡುತ್ತಿದೆ. ಐದು ಬಾರಿ ಭೇಟಿ ಮಾಡಿದ್ದರೂ ಪಿಯೂಶ್ ಗೋಯಲ್ ತಮ್ಮನ್ನು ಭೇಟಿಯೇ ಮಾಡಿಲ್ಲ ಎಂದಿದ್ದಾರೆ. ನಾನು ಈ ವಿಚಾರದಲ್ಲಿ ರಾಜರಾಕಣ ಮಾಡುವುದಿಲ್ಲ. ಸ್ವಾಭಿಮಾನ ಬಿಟ್ಟು ರಾಜ್ಯದ ಜನರಿಗಾಗಿ ಮತ್ತೊಮ್ಮೆ ಭೇಟಿ ಮಾಡುತ್ತೇನೆ ಎಂದರು.
ಕಲ್ಲಿದ್ದಲು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ತಮ್ಮನ್ನು ಸಂಪರ್ಕಿಸಿಲ್ಲ. ಈ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಕೇಂದ್ರ ಇಂಧನ ಸಚಿವ ಪಿಯೋಶ್ ಗೋಯಲ್ ಸಂಸತ್ತಿನಲ್ಲಿ ಹಸಿ ಸುಳ್ಳು ಹೇಳಿದ್ದಾರೆ. ನಾನು ಮುಖ್ಯಮಂತ್ರಿಗಳು ಸೇರಿದಂತೆ ಐದು ಬಾರಿ ಅವರನ್ನು ಖುದ್ದಾಗಿ ಭೇಟಿ ಮಾಡುವ ಪ್ರಯತ್ನ ಮಾಡಿದ್ದೇವೆ. ಅಧಿಕಾರಿಗಳು ೫೫ಕ್ಕೂ ಹೆಚ್ಚು ಬಾರಿ ಸಂಪರ್ಕಿಸಿದ್ದಾರೆ. ಹೀಗಿದ್ದರೂ ಸಂಸತ್‌ನಲ್ಲಿ ಸುಳ್ಳು ಹೇಳುವ ಮೂಲಕ ರಾಜಕಾರಣ ಮಾಡುತ್ತಿದ್ದಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com