ರಾಜ್ಯದ ರೈತರ 8,165 ಕೋಟಿ ರೂ ಸಾಲ ಮನ್ನಾ: ಸಿದ್ದರಾಮಯ್ಯ

ರಾಜ್ಯದ 22 ಲಕ್ಷಕ್ಕೂ ಅಧಿಕ ರೈತರ 8,165 ಕೋಟಿ ರೂಪಾಯಿ ಸಾಲವನ್ನು ಮನ್ನಾ ...
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Updated on
ಪುತ್ತೂರು: ರಾಜ್ಯದ 22 ಲಕ್ಷಕ್ಕೂ ಅಧಿಕ ರೈತರ 8,165 ಕೋಟಿ ರೂಪಾಯಿ ಸಾಲವನ್ನು ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
 ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಿನ್ನೆ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು ಬಿಜೆಪಿ ನಾಯಕ ಯಡಿಯೂರಪ್ಪ ಅಧಿಕಾರದಲ್ಲಿದ್ದಾಗ ಏನೂ ಮಾಡದೆ ಈಗ ತಮ್ಮನ್ನು ಮತ್ತೆ ಮುಖ್ಯಮಂತ್ರಿ ಮಾಡಿದರೆ ಸಾಲ ಮನ್ನಾ ಮಾಡುವುದಾಗಿ ಹೇಳುತ್ತಿದ್ದಾರೆ ಎಂದು ಟೀಕಿಸಿದರು.
 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಕೋಮು ಗಲಭೆ ನಡೆಯಲು ಬಿಡುವುದಿಲ್ಲ -ಶಾಂತಿ,ಸಾಮರಸ್ಯ ಕಾಪಾಡಲು ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಮನವಿ ಮಾಡಿದರು.
 ಕೋಮು ಗಲಭೆ ನಡೆಸುವವರು ಹಾಗೂ ಪ್ರಚೋದನೆ ನೀಡುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳವ ಬಗ್ಗೆ ಶೀಘ್ರದಲ್ಲೇ ಕಠಿಣ ಕಾನೂನೊಂದನ್ನು ರೂಪಿಸಲಾಗುವುದು ಎಂದು ಸಿದ್ಧರಾಮಯ್ಯ ತಿಳಿಸಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com