ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಧನ್ಯಶ್ರೀ ಎಂಬಾಕೆ ಆತ್ಮಹತ್ಯೆ ಮಾಡಿಕೊಳ್ಳಲು ಬಿಜೆಪಿ ಯುವಮೋರ್ಚದವರೇ ಕಾರಣ ಎಂದು ಬೆಂಗಳೂರಿನಲ್ಲಿ ನಿನ್ನೆ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಸಂಘ ಪರಿವಾರ ಭಯೋತ್ಪಾದಕ ಸಂಘಟನೆಯಾಗಿ ಪರಿವರ್ತನೆಯಾಗಿದೆ. ಮುಗ್ಧ ಜನರ ಮರಣದ ವಿಷಯವನ್ನಿಟ್ಟುಕೊಂಡು ಬಿಜೆಪಿಯವರು ಆಟವಾಡುತ್ತಿದ್ದಾರೆ ಎಂದು ಆರೋಪಿಸಿದರು.