ಕೇಂದ್ರದಿಂದ ಕಾಂಗ್ರೆಸ್ ನಾಯಕರ ಫೋನ್ ಕದ್ದಾಲಿಕೆ: ರಾಮಲಿಂಗಾ ರೆಡ್ಡಿ ಆರೋಪ

ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರ ಫೋನ್ ಕರೆಗಳನ್ನು ಕದ್ದಾಲಿಸುತ್ತಿದೆ...
ರಾಮಲಿಂಗಾ ರೆಡ್ಡಿ
ರಾಮಲಿಂಗಾ ರೆಡ್ಡಿ
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಾಂಗ್ರೆಸ್ ನಾಯಕರ ಫೋನ್ ಕರೆಗಳನ್ನು ಕದ್ದಾಲಿಸುತ್ತಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಗುರುವಾರ ಗಂಭೀರ ಆರೋಪ ಮಾಡಿದ್ದಾರೆ.
ಇಂದು ವಿಧಾನಸೌಧ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು, ಕೇಂದ್ರ ಸರ್ಕಾರ ಕಾಂಗ್ರೆಸ್ ಪಕ್ಷದ ಕೆಲವು ಪ್ರಮುಖ ಸಚಿವರ ಹಾಗೂ ಶಾಸಕರ ಫೋನ್ ಕದ್ದಾಲಿಸುತ್ತಿದೆ ಎಂದು ನಾನು ಹಲವು ದಿನಗಳಿಂದ ಹೇಳುತ್ತಿದ್ದೇನೆ. ಕೇಂದ್ರ ಹೇಗೆ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಇದರ ವಿರುದ್ಧ ಕಾನೂನು ರೀತಿಯಲ್ಲೇ ಹೋರಾಟ ಮಾಡಬೇಕಾಗಿದೆ ಎಂದರು.
ಯಾರೇ ಆಗಲಿ, ಸಚಿವರು, ಶಾಸಕರ ಫೋನ್ ಕದ್ದಾಲಿಕೆ ಮಾಡುವುದು ಸರಿಯಲ್ಲ. ಇದರ ವಿರುದ್ಧ ಸಂಬಂಧಪಟ್ಟವರು ನ್ಯಾಯಾಲಯಗಳಲ್ಲಿ ಪ್ರಶ್ನಿಸಬೇಕಾಗಿದೆ ಎಂದು ಗೃಹ ಸಚಿವರು ಹೇಳಿದ್ದಾರೆ. ಆದರೆ ಯಾವ ಸಚಿವರ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂಬುದನ್ನು ತಿಳಿಸಲು ನಿರಾಕಿಸಿದರು.
ಇದೇ ವೇಳೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಧನ್ಯಶ್ರೀ ಆತ್ಮಹತ್ಯೆ ಪ್ರಕರಣ ಸಂಬಂಧ ಈಗಾಗಲೇ ನಾಲ್ವರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ. ತನಿಖೆ ನಂತರ ಸತ್ಯಾಸತ್ಯತೆ ಹೊರಬರಲಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com