ಬಿಜೆಪಿ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಜೆಡಿಎಸ್ ಸೇರ್ಪಡೆ

ಮಾಜಿ ಸಚಿವ, ಬಿಜೆಪಿ ಮುಖಂಡ ಆನಂದ್ ಆಸ್ನೋಟಿಕರ್ ಇಂದು ಅಧಿಕೃತವಾಗಿ ಜೆಡಿ(ಎಸ್) ಗೆ ಸೇರ್ಪಡೆಯಾಗಿದ್ದಾರೆ.
ಆನಂದ್ ಅಸ್ನೋಟಿಕರ್ ಜೆಡಿಎಸ್ ಸೇರ್ಪಡೆ
ಆನಂದ್ ಅಸ್ನೋಟಿಕರ್ ಜೆಡಿಎಸ್ ಸೇರ್ಪಡೆ
ಕಾರವಾರ: ಮಾಜಿ ಸಚಿವ, ಬಿಜೆಪಿ ಮುಖಂಡ ಆನಂದ್ ಆಸ್ನೋಟಿಕರ್ ಇಂದು ಅಧಿಕೃತವಾಗಿ ಜೆಡಿ(ಎಸ್) ಗೆ ಸೇರ್ಪಡೆಯಾಗಿದ್ದಾರೆ.
ಕಾರವಾರ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಆನಂದ್ ಆಸ್ನೋಟಿಕರ್ ಉತ್ತರ ಕನ್ನಡ ಜಿಲ್ಲೆಯ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದಾರೆ.ಿದಕ್ಕೂ ಕೆಲ ದಿನಗಳ ಹಿಂದೆ ಬಿಜೆಪಿ ತೊರೆಯುವ ಬಗೆಗೆ ತಮ್ಮ ಕಾರ್ಯಕರ್ತರು, ಬೆಂಬಲಿಗರಿಗೆ ಸೂಚನೆ ನೀಡಿದ್ದ ಆಸ್ನೋಟಿಕರ್ ಇಂದು ಬೆಂಗಳೂರಿನ ದೇವೇಗೌಡರ ನಿವಾಸದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಜೆಡಿಎಸ್ ಗೆ ಸೇರ್ಪಡೆ ಆಗಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ಮಧು ಬಂಗಾರಪ್ಪ ಸೇರಿ ಹಲವು ಗಣ್ಯರ ಸಮ್ಮುಖದಲ್ಲಿ ಜೆಡಿಎಸ್ ಗೆ ಸೇರಿದ ಅಸ್ನೋಟಿಕರ್ ಬಿಜೆಪಿ ಅಧಿಕಾರದಲ್ಲಿದ್ದಾಗ ಮೀನುಗಾರಿಕಾ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
2013ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಾರವಾರ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಸ್ಪರ್ಧಿಸಿದ್ದ ಅಸ್ನೋಟಿಕರ್ 44,847 ಮತಗಳನ್ನು ಪಡೆದು ಸೋಲನುಭವಿಸಿದ್ದರು. ಈ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿದ್ದ ಸಂತೀಷ್ ಸಾಇಲ್ ಕೃಷ್ಣ ಜಯ ಸಾಧಿಸಿದ್ದರು.
ಈ ಫಲಿತಾಂಶದ ಬಳಿಕ ಅಸ್ನೋಟಿಕರ್ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದರು. ಆದರೆ ಅವರಬೆಂಬಲಿಗರು ಕಳೆದೆರಡು ತಿಂಗಳ ಹಿಂದೆ ಅವರನ್ನು ಮತ್ತೆ ಸರ್ಕಿಯ ರಾಜಕಾರಣಕ್ಕೆ ಬರುವಂತೆ ಒತ್ತಾಯಿಸುತ್ತಿದ್ದರು. ಇದಾಗಿ ಆನಂದ್ ಆಸ್ನೋಟಿಕರ್ ಜೆಡಿಎಸ್ ಸೇರಿದ ಕಾರಣ ಕರಾವಳಿ ಭಾಗದಲ್ಲಿ ಜೆಡಿಎಸ್ ಪಕ್ಷದ ಬಲವರ್ಧನೆಯಾಗಲಿದೆ ಎಂದು ನಿರೀಕ್ಷಿಸಲಾಗಿದ್ದು ಇದು ಬಿಜೆಪಿ ಗೆ ದೊಡ್ಡ ಹಿನ್ನೆಡೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com