ಇಂದು ಬೆಳಗ್ಗೆಯಷ್ಟೇ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಲಿಂಗಸುಗೂರು ಜೆಡಿಎಸ್ ಶಾಸಕ ಮಾನಪ್ಪ ವಜ್ಜಲ್ ಹಾಗೂ ರಾಯಚೂರು ನಗರ ಜೆಡಿಎಸ್ ಶಾಸಕ ಡಾ. ಶಿವರಾಜ ಪಾಟೀಲ್ ಅವರು ಮಧ್ಯಾಹ್ನ ಮಲ್ಲೇಶ್ವರಂ ನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವರಾದ ಅನಂತಕುಮಾರ್, ಪಿಯೂಶ್ ಗೊಯಲ್ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ಮುರುಳೀಧರ ರಾವ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.