ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಲಬುರ್ಗಿ, ಬಿದರ್, ರಾಯಚೂರು, ಕೊಪ್ಪಳ, ಯಾದರಿಗಿ, ಬಳ್ಳಾರಿ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ವಿಜಯಪುರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮೀಣ ಜಿಲ್ಲೆಗಳ ಹೆಚ್ಚು ಮುಸ್ಲಿಂ ಪ್ರಾಬಲ್ಯವಿರುವ ಸುಮಾರು 60 ಕ್ಷೇತ್ರಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಎಐಎಂಐಎಂ ನಿರ್ಧರಿಸಿದೆ. "ನಾವು 25 ರಿಂದ 30 ಕ್ಷೇತ್ರಗಳಲ್ಲಿ ಪ್ರಬಲ ಪೈಪೋಟಿಯನ್ನು ನೀಡುತ್ತೇವೆ, ನಾವು ಅವುಗಳಲ್ಲಿ ಹೆಚ್ಚಿನ ಪಾಲು ಗೆಲುವು ಸಾಧಿಸುತ್ತೇವೆ ಎನ್ನುವ ಭರವಸೆ ಇದೆ. ಇದರಲ್ಲಿ ಬೆಂಗಳೂರು ನಗರದಲ್ಲಿರುವ ಶಿವಾಜಿನಗರ, ಪುಲಕೇಶಿ ನಗರ್ ಮತ್ತು ಚಾಮರಾಜಪೇಟೆ ಕ್ಷೇತ್ರಗಳು ಸೇರಿವೆ " ಎಐಎಂಐಎಂ ರಾಜ್ಯಾಧ್ಯಕ್ಷ ಉಸ್ಮಾನ್ ಘನಿ ಎಕ್ಸ್ ಪ್ರೆಸ್ ಗೆ ತಿಳಿಸಿದರು