ಓವೈಸಿ ಜೊತೆ ಮೈತ್ರಿ ಸುಳ್ಳು: ಕಾಂಗ್ರೆಸ್ ವಿರುದ್ದ ಬಿಜೆಪಿ ಕಿಡಿ

ಮುಂಬರುವ ವಿಧಾನಸಭೆ ಚುನಾವಣೆಗೆ ಸಂಬಂಧಪಟ್ಟಂತೆ ಎಐಎಂಐಎಂ ಸಂಸ್ಥಾಪಕ ಅಸಾದುದ್ದೀನ್ ಓವೈಸಿ ಜೊತೆಗೆ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ರಾಜ್ಯ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಸಂಬಂಧಪಟ್ಟಂತೆ ಎಐಎಂಐಎಂ ಸಂಸ್ಥಾಪಕ ಅಸಾದುದ್ದೀನ್ ಓವೈಸಿ ಜೊತೆಗೆ ಬಿಜೆಪಿ ಒಳ ಒಪ್ಪಂದ ಮಾಡಿಕೊಂಡಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ರಾಜ್ಯ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ರಾಜ್ಯ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿರುವ ರಾಜ್ಯ ಬಿಜೆಪಿ ವಕ್ತಾರ ಅಶ್ವತ್ಥ ನಾರಾಯಣ ಅವರು, ಮುಂದಿನ ಚುನಾವಣೆಯಲ್ಲಿ ಓವೈಸಿ ಜೊತೆಗೆ ಬಿಜೆಪಿ ಒಪ್ಪಂದ ಮಾಡಿಕೊಂಡಿದೆ ಎನ್ನುವುದು ಸುಳ್ಳು. ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಹತಾಶೆಗೊಳಗಾಗಿ ಇಂತರ ನಿರಾಧಾರ ಹೇಳಿಕೆಗಳನ್ನು ನೀಡುತ್ತಿದ್ದಾರೆಂದು ಹೇಳಿದ್ದಾರೆ.  
ಎಐಎಂಐಎಂ ಸೇರಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವಂತ ಸ್ಥಿತಿ ಬಿಜೆಪಿಗೆ ಬಂದಿಲ್ಲ. ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ ಕೆಟ್ಟ ತಂತ್ರಗಳನ್ನು ಬಳಕೆ ಮಾಡುತ್ತಿದೆ. ಕಾಂಗ್ರೆಸ್ ನಾಯಕರ ಹೇಳಿಕೆಗಳನ್ನು ನೋಡಿದರೆ, ಅವರು ಎಷ್ಟರ ಮಟ್ಟಿಗೆ ಹತಾಶೆಗೊಂಡಿದ್ದಾರೆಂಬುದನ್ನು ತೋರಿಸುತ್ತದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಬಹುಮತದ ಮೂಲಕ ಅಧಿಕಾರಕ್ಕೆ ಬರಲಿದೆ. 150 ಮಿಶನ್ ನಮ್ಮ ಗುರಿಯಾಗಿದ್ದು, ನಮ್ಮ ಗುರಿ ಮುಟ್ಟಲು ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಲಲಾಗುತ್ತಿದೆ. ನಮ್ಮ ಗುರಿಯನ್ನು ನಾವು ಮುಟ್ಟುತ್ತೇವೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com