ಕುಂದಾಪುರ: ಶಾಸಕ ಸ್ಥಾನಕ್ಕೆ ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜೀನಾಮೆ

ಕುಂದಾಪುರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ.
ಹಾಲಾಡಿ ಶ್ರೀನಿವಾಸ ಶೆಟ್ಟಿ
ಹಾಲಾಡಿ ಶ್ರೀನಿವಾಸ ಶೆಟ್ಟಿ
ಕುಂದಾಪುರ: ಕುಂದಾಪುರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ. 2013ರ ಚುನಾವಣೆಯಲ್ಲಿ ಪಕ್ಷೇತರರಾಗಿ ಗೆದ್ದು ಶಾಸಕರಾಗಿದ್ದ ಶ್ರೀನಿವಾಸ ಶೆಟ್ಟಿ  ತಮ್ಮ ಶಾಸಕ ಸ್ಥಾನದ ಅವಧಿ ಮುಗಿಯುವ ಮುನ್ನ ರಾಜೀನಾಮೆ ನೀಡಲು ನಿರ್ಧರಿಸಿದ್ದು ಅದಕ್ಕಾಗಿ  ಸ್ಪೀಕರ್‌ ಕೋಳಿವಾಡ ಭೇಟಿಯಾಗಲು ರಾಣಿಬೆನ್ನೂರಿಗೆ ತೆರಳಿದ್ದಾರೆ.
ಶಾಸಕರು ತಾವು ಮತ್ತೆ ಮಾತೃಪಕ್ಷ ಬೆಜೆಪಿ ಸೇರುವುದಕ್ಕಾಗಿ ಸಿದ್ದತೆ ನಡೆಸಿದ್ದು  ಫೆ. 4ರಂದು ಪ್ರಧಾನಿ  ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ನಿಷ್ಕಳಂಕ ರಾಜಕಾರಣಿ, ಸರಳ ವ್ಯಕ್ತಿಯಾಗಿದ್ದು ಅಪಾರ ಜನ ಬೆಂಬಲ ಹೊಂದಿರುವ ಶ್ರೀನಿವಾಸ ಶೆಟ್ಟಿಯವರನ್ನು ಕುಂದಾಪುರದ ಬಿಜೆಪಿ ಅಭ್ಯರ್ಥಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಇದಾಗಲೇ ಘೋಷಣೆ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com