ಬೆಂಗಳೂರು: ಮೊದಲನೇ ಹಂತದಲ್ಲಿ 30 ನಿಗಮ ಮಂಡಳಿಗಳಿಗೆ ನೇಮಕ ಮಾಡಿಕೊಳ್ಳುವ ಬಗ್ಗೆ ಸಮನ್ವಯ ಸಮಿತಿ ಪೂರ್ವಭಾವಿ ಸಭೆಯಲ್ಲಿ ಚರ್ಚೆಯಾಗಿದ್ದು, ಖಾತೆಗಳಿಗೆ ಅನುಸಾರವಾಗಿ ಮಂಡಳಿಗಳನ್ನ ಎರಡು ಪಕ್ಷಗಳು ಹಂಚಿಕೊಳ್ಳುವುದು ಸೂಕ್ತ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.