ಕುಮಾರಸ್ವಾಮಿ ಹಠಕ್ಕೆ ಮಣಿದ ಕಾಂಗ್ರೆಸ್; ಬೆಳೆ ಸಾಲಮನ್ನಾ, ನೂತನ ಬಜೆಟ್ ಮಂಡನೆಗೆ ಸಮ್ಮತಿ!

ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಿಸಿದಂತೆ ರೈತರ ಕೃಷಿ ಸಾಲ ಮನ್ನಾಗೆ ಹಸಿರು ನಿಶಾನೆ ಸಿಕ್ಕಿದ್ದು...
ಹೆಚ್ ಡಿ ಕುಮಾರಸ್ವಾಮಿ-ಸಿದ್ದರಾಮಯ್ಯ
ಹೆಚ್ ಡಿ ಕುಮಾರಸ್ವಾಮಿ-ಸಿದ್ದರಾಮಯ್ಯ
ಬೆಂಗಳೂರು: ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಿಸಿದಂತೆ ರೈತರ ಕೃಷಿ ಸಾಲ ಮನ್ನಾಗೆ ಹಸಿರು ನಿಶಾನೆ ಸಿಕ್ಕಿದ್ದು ನೂತನ ಬಜೆಟ್ ಮಂಡನೆಗೆ ಸಮ್ಮತಿಸಲಾಗಿದೆ. 
ರೈತರ ಸಾಲ ಮನ್ನಾ ವಿಷಯವಾಗಿ ಇದ್ದ ಗೊಂದಲಗಳು ನಿವಾರಣೆಯಾಗಿದೆ. ಕುಮಾರಸ್ವಾಮಿ ಅವರ ಹಠಕ್ಕೆ ಕೊನೆಗೂ ಮಣಿದ ಕಾಂಗ್ರೆಸ್ ಆರ್ಥಿಕ ಹೊರೆ ಆಗದ ರೀತಿಯಲ್ಲಿ ಸಾಲಮನ್ನಾ ಮಾಡಲು ಒಪ್ಪಿಗೆ ನೀಡಿದೆ. ಇದೇ 5ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಡಿಸಲಿರುವ ಬಜೆಟ್ ನಲ್ಲಿ ರೈತರ ಸಾಲಮನ್ನಾ ಕುರಿತು ಘೋಷಣೆ ಮಾಡಲಿದ್ದಾರೆ. 
ಕುಮಾರಕೃಪ ಅತಿಥಿ ಗೃಹದಲ್ಲಿ ನಡೆದ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್, ಜೆಡಿಎಸ್ ನ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಡ್ಯಾನೀಶ್ ಅಲಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ಉಪಸ್ಥಿತರಿದ್ದರು. 
ಇದೇ ವೇಳೆ ಹಿಂದಿನ ಸಿದ್ದರಾಮಯ್ಯ ಸರ್ಕಾರದ ಎಲ್ಲಾ ಜನಪ್ರಿಯ ಭಾಗ್ಯ ಮತ್ತಿತ್ತರ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗಲು ಸಹ ತೀರ್ಮಾನಿಸಲಾಗಿದೆ. 
ನೂತನ ಸರ್ಕಾರದ ಸಾಮಾನ್ಯ ಕನಿಷ್ಠ ಕಾರ್ಯಕ್ರಮವನ್ನು 'ಕನಿಷ್ಠ ಬದಲಾವಣೆ' ಹಾಗೂ 'ಸಣ್ಣ ಹೊಂದಾಣಿಕೆ' ಮೂಲಕ ಜಾರಿಗೆ ತರಲು ತೀರ್ಮಾನಿಸಲಾಗಿದೆ ಎಂದು ಡ್ಯಾನೀಶ್ ಅಲಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com