ನಿಮ್ಮ ಶಾಸಕರೇನು ಸತ್ತೋದ್ರ, ಕಾಂಗ್ರೆಸ್ ಶಾಸಕ ವಿರುದ್ಧ ಅನಂತ್ ಕುಮಾರ್ ಹೆಗ್ಡೆ ಪರೋಕ್ಷ ವಾಗ್ದಾಳಿ!

ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗಡೆ ಮತ್ತೆ ಸುದ್ದಿಯಲ್ಲಿದ್ದಾರೆ. ಹೌದು ಈ ಬಾರಿ ಕಾಂಗ್ರೆಸ್ ಶಾಸಕ ಶಿವರಾಮ ಹೆಬ್ಬಾರ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ...
ಅನಂತ್ ಕುಮಾರ್ ಹೆಗ್ಡೆ
ಅನಂತ್ ಕುಮಾರ್ ಹೆಗ್ಡೆ
Updated on: 
ಶಿರಸಿ (ಉತ್ತರಕನ್ನಡ): ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗಡೆ ಮತ್ತೆ ಸುದ್ದಿಯಲ್ಲಿದ್ದಾರೆ. ಹೌದು ಈ ಬಾರಿ ಕಾಂಗ್ರೆಸ್ ಶಾಸಕ ಶಿವರಾಮ ಹೆಬ್ಬಾರ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. 
ಅರಣ್ಯ ಇಲಾಖೆ ಶಿರಸಿ ತಾಲೂಕಿನ ಬನವಾಸಿಯಲ್ಲಿ ಹಮ್ಮಿಕೊಂಡಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅನಂತ್ ಕುಮಾರ್ ಹೆಗ್ಡೆ ಅವರನ್ನು ಮಹಿಳೆಯೊಬ್ಬರು ಹಲವು ವರ್ಷಗಳಿಂದ ಬನವಾಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವೈದ್ಯರಿಲ್ಲ, ವೈದ್ಯರನ್ನು ನೇಮಕ ಮಾಡಿಕೊಡಿ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದರು. 
ಇದಕ್ಕೆ ಅನಂತ್ ಕುಮಾರ್ ಹೆಗ್ಡೆ ಅವರು, ನಮ್ಮ ಶಾಸಕರೇನಾದ್ರೂ ಸತ್ತು ಹೋದ್ರ? ಎಂದು ಪ್ರಶ್ನಿಸಿ, ಸ್ಥಳೀಯ ಕಾಂಗ್ರೆಸ್ ಶಾಸಕ ಶಿವರಾಮ ಹೆಬ್ಬಾರ್ ಮೇಲಿನ ಕೋಪವನ್ನು ಕಾರ್ಯಕ್ರಮದಲ್ಲೇ ಹೊರಹಾಕಿದ್ದಾರೆ. 
ಇದೇ ವೇಳೆ ಮಹಿಳೆಗೆ ಇದು ನನ್ನ ವ್ಯಾಪ್ತಿಗೆ ಬರುವುದಿಲ್ಲ. ಇದು ರಾಜ್ಯ ಸರ್ಕಾರಕ್ಕೆ ಬರುತ್ತದೆ ಎಂದು ಹೇಳಿ ಅಲ್ಲಿಂದ ತೆರಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com