ರಾಜ್ಯದ ಆರ್ಥಿಕ ಸ್ಥಿತಿಗತಿ ಬಗ್ಗೆ ಶ್ವೇತ ಪತ್ರ ಹೊರಡಿಸಿ: ಬಿಎಸ್ ವೈ ಆಗ್ರಹ

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡಿಸುವ ಮುನ್ನ ರಾಜ್ಯದ ಆರ್ಥಿಕ...
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ
ಬೆಂಗಳೂರು: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡಿಸುವ ಮುನ್ನ ರಾಜ್ಯದ ಆರ್ಥಿಕ ಸ್ಥಿತಿಗತಿ ಬಗ್ಗೆ ಶ್ವೇತ ಪತ್ರ ಹೊರಡಿಸಬೇಕು ಎಂದು ಪ್ರತಿಪಕ್ಷದ ನಾಯಕ ಬಿಎಸ್ ಯಡಿಯೂರಪ್ಪ ಅವರು ಮಂಗಳವಾರ ಆಗ್ರಹಿಸಿದರು.
ಇಂದು ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಬಿಎಸ್ ವೈ, ಮುಖ್ಯಮಂತ್ರಿಗಳು ಬಜೆಟ್ ಮಂಡಿಸುವ ಮುನ್ನ ರಾಜ್ಯದ ಹಣಕಾಸು ಸ್ಥಿತಿಗತಿ ಬಗ್ಗೆ ಶ್ವೇತ ಪತ್ರ ಮಂಡಿಸಲಿ ಎಂದು ಒತ್ತಾಯಿಸಿದರು.
ರಾಜ್ಯ ಸರ್ಕಾರ 2.38 ಲಕ್ಷ ಕೋಟಿ ಸಾಲ ಮಾಡಿದ. ಈ ಸಾಲ ತೀರಿಸಲು ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದ ಮಾಜಿ ಸಿಎಂ, ಲೋಕೋಪಯೋಗಿ ಮತ್ತು ನೀರಾವರಿ ಇಲಾಖೆಯಲ್ಲಿ ಸುಮಾರು 10 ಸಾವಿರ ಕೋಟಿ ರುಪಾಯಿಯ ಬಿಲ್ ಗಳು ಬಾಕಿ ಉಳಿದಿವೆ ಎಂದರು.
ಇದೇ ವೇಳೆ ಅಧಿಕಾರಕ್ಕಾಗಿ ಕಾಂಗ್ರೆಸ್ - ಜೆಡಿಎಸ್ ಅಪವಿತ್ರ ಮೈತ್ರಿ ಮಾಡಿಕೊಂಡಿವೆ ಎಂದು ಆರೋಪಿಸಿದ ಯಡಿಯೂರಪ್ಪ, ರಾಜ್ಯದ ಮುಖ್ಯಮಂತ್ರಿ ಯಾರು ಎಂಬುದರ ಬಗ್ಗೆ ಜನರಲ್ಲಿ ಗೊಂದಲ ಇದೆ ಎಂದರು.
ಈ ಹಿಂದೆ ಬಿಜೆಪಿ, ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ನಾನು ಹಣಕಾಸು ಸಚಿವನಾಗಿದ್ದಾಗ ಸಾಲಮನ್ನಾ ತೀರ್ಮಾನ ಕೈಗೊಂಡಿದ್ದೆ. ಆದರೆ ಅದಕ್ಕೆ ಕುಮಾರಸ್ವಾಮಿ ಅವರು ಬಲವಾಗಿ ಅಡ್ಡಿಪಡಿಸಿದವರು ಎಂದು ಬಿಎಸ್ ವೈ ವಾಗ್ದಾಳಿ ನಡೆಸಿದರು.
ರಾಜ್ಯಪಾಲರಿಂದ ದಿಕ್ಕು ದಿಶೆಯಿಲ್ಲದ ಭಾಷಣ ಮಾಡಿಸಲಾಗಿದೆ. ಇದರಿಂದ ಹಿಂದಿನ ಸರ್ಕಾರದ ಯೋಜನೆಗಳನ್ನು ಪ್ರಸ್ತಾಪಿಸಲು ಸಿಎಂಗೆ ಮನಸ್ಸಿಲ್ಲ ಎಂಬುದು ಗೊತ್ತಾಗುತ್ತದೆ ಎಂದು ಟೀಕಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com