ಪಟ್ಟಭದ್ರ ಹಿತಾಸಕ್ತಿಗಳಿಂದ ಸಾಮಾಜಿಕ , ಆರ್ಥಿಕ ಸಮೀಕ್ಷಾ ವರದಿ ಬಿಡುಗಡೆ ವಿಳಂಬ

ಸಿದ್ದರಾಮಯ್ಯ ನೇತೃತ್ವದ ಹಿಂದಿನ ಸರ್ಕಾರ ಕೈಗೊಂಡಿದ್ದ ಸಾಮಾಜಿಕ ಆರ್ಥಿಕ ಸಮೀಕ್ಷಾ ವರದಿ ಇನ್ನೂ ಬಿಡುಗಡೆಯಾಗದಿರಲು ಪಟ್ಟಭದ್ರ ಹಿತಾಸಕ್ತಿಯೇ ಪ್ರಮುಖ ಕಾರಣ ಎಂದು ವಿಧಾನಪರಿಷತ್ತಿನ ಆಡಳಿತಾರೂಢ ಪಕ್ಷದ ಕೆಲ ಸದಸ್ಯರು ಆರೋಪಿಸಿದ್ದಾರೆ.
ವಿಧಾನಸೌಧ
ವಿಧಾನಸೌಧ

ಬೆಂಗಳೂರು:ಸಿದ್ದರಾಮಯ್ಯ ನೇತೃತ್ವದ ಹಿಂದಿನ ಸರ್ಕಾರ  ಕೈಗೊಂಡಿದ್ದ  ಸಾಮಾಜಿಕ ಆರ್ಥಿಕ ಸಮೀಕ್ಷಾ ವರದಿ ಇನ್ನೂ ಬಿಡುಗಡೆಯಾಗದಿರಲು ಪಟ್ಟಭದ್ರ ಹಿತಾಸಕ್ತಿಯೇ  ಪ್ರಮುಖ ಕಾರಣ ಎಂದು ವಿಧಾನಪರಿಷತ್ತಿನ ಆಡಳಿತಾರೂಢ ಪಕ್ಷದ ಕೆಲ ಸದಸ್ಯರು ಆರೋಪಿಸಿದ್ದಾರೆ.

ಈ ಮಧ್ಯೆ , ಬಜೆಟ್ ಅಧಿವೇಶನ ಮುಗಿಯುವುದರೊಳಗೆ  ವರದಿ ಬಿಡುಗಡೆ ಮಾಡದಿದ್ದರೆ ಸದನದಲ್ಲಿ ಹೋರಾಟ ನಡೆಸುವುದಾಗಿ ಪ್ರತಿಪಕ್ಷ ಎಚ್ಚರಿಕೆ ನೀಡಿದೆ.

ಗಮನ ಸೆಳೆಯುವ ಸೂಚನೆಯಡಿ  ಸದಸ್ಯ ಕೆ. ಪಿ. ನಂಜುಂಡಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಹಿಂದುಳಿದ ವರ್ಗಗಳ ಖಾತೆ ಸಚಿವ ಸಿ. ಪುಟ್ಟರಂಗಶೆಟ್ಟಿ, ಸರ್ವೆಯು ಮಾಹಿತಿಯನ್ನು ಸಂಗ್ರಹಿಸಿದ್ದು, ಮಾಹಿತಿ ವಿಶ್ಲೇಷಣೆ ಕಾರ್ಯ ಪ್ರಗತಿಯಲ್ಲಿದೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗ ತನ್ನ ವರದಿ ಪೂರ್ಣಗೊಳಿಸಿದ ಬಳಿಕ ವರದಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

 ಆದಾಗ್ಯೂ, ಸಚಿವರ ಪ್ರಶ್ನೆಗೆ ಕಾಂಗ್ರೆಸ್ ಪಕ್ಷದ ಸದಸ್ಯರಾದ ವಿ.ಎಸ್. ಉಗ್ರಪ್ಪ, ಕೆ. ಸಿ. ಕೊಂಡಯ್ಯ ಹಾಗೂ ಕೆ. ಪಿ. ನಂಜುಂಡಿ ಆಕ್ಷೇಪ ವ್ಯಕ್ತಪಡಿಸಿದರು. 1350 ಜಾತಿಗಳನ್ನು ಸಮೀಕ್ಷೆ ನಡೆಸಲಾಗಿದೆ ಎಂಬ ಮಾಹಿತಿ ಇದೆ. ಆದರೆ, ಸರ್ಕಾರ ಏಕೆ ಬಿಡುಗಡೆ ಮಾಡುತ್ತಿಲ್ಲ ಎಂಬುದು ಅರ್ಥವಾಗುತ್ತಿಲ್ಲ ಎಂದು ಕೆ. ಪಿ. ನಂಜುಂಡಿ ಹೇಳಿದರು. ಕೂಡಲೇ ವರದಿ ಬಿಡುಗಡೆ ಮಾಡಬೇಕೆಂದು ಕೆ. ಸಿ. ಕೊಂಡಯ್ಯ ಸರ್ಕಾರವನ್ನು ಒತ್ತಾಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com