ಬಜೆಟ್ ಕುರಿತ ಕಾಂಗ್ರೆಸ್ ಟೀಕೆಗಳಿಗೆ ವಿಧಾನಸಭೆಯಲ್ಲೇ ಸಿಎಂ ಉತ್ತರ ನೀಡಲಿದ್ದಾರೆ: ಹೆಚ್.ಡಿ.ದೇವೇಗೌಡ

2018-19ನೇ ಸಾಲಿನ ರಾಜ್ಯ ಬಜೆಟ್ ಕುರಿತಂತೆ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ವಿಧಾನಸಭೆಯಲ್ಲಿಯೇ ಉತ್ತರ ನೀಡಲಿದ್ದಾರೆಂದು ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಶನಿವಾರ ಹೇಳಿದ್ದಾರೆ...
ಪ್ರಧಾನಮಂತ್ರಿ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ
ಪ್ರಧಾನಮಂತ್ರಿ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ
ಬೆಂಗಳೂರು: 2018-19ನೇ ಸಾಲಿನ ರಾಜ್ಯ ಬಜೆಟ್ ಕುರಿತಂತೆ ಕಾಂಗ್ರೆಸ್ ನಾಯಕರ ಟೀಕೆಗಳಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ವಿಧಾನಸಭೆಯಲ್ಲಿಯೇ ಉತ್ತರ ನೀಡಲಿದ್ದಾರೆಂದು ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಶನಿವಾರ ಹೇಳಿದ್ದಾರೆ. 
ರಾಜ್ಯ ಬಜೆಟ್ ಕುರಿತಂತೆ ಟೀಕೆ ಮಾಡಿ ಕಾಂಗ್ರೆಸ್ ನಾಯಕ ಹೆಚ್.ಕೆ. ಪಾಟೀಲ್ ಅವರು ಕುಮಾರಸ್ವಾಮಿಯವರಿಗೆ ಬರೆದಿರುವ ಪತ್ರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ವಿಧಾನಮಂಡಲದಲ್ಲಿಯೇ ಮುಖ್ಯಮಂತ್ರಿಗಳು ರಾಜ್ಯ ಬಜೆಟ್ ಕುರಿತ ಅಗತ್ಯ ಮಾಹಿತಿಗಳನ್ನು ನೀಡಿಲಿದ್ದಾರೆ. ಬಳಿಕ ಎಲ್ಲಾ ಸಂಶಯಗಳು ನಿವಾರಣೆಯಾಗಲಿವೆ ಎಂದು ಹೇಳಿದ್ದಾರೆ. 
ರಾಜ್ಯ ಬಜೆಟ್ ಕುರಿತಂತೆ ಕುಮಾರಸ್ವಾಮಿಯವರಿಗೆ ಪತ್ರ ಬರೆದಿದ್ದ ಹೆಚ್.ಕೆ. ಪಾಟೀಲ್ ಅವರು, ಕಳೆದ ಬಾರಿ ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳನ್ನು ಬಿಟ್ಟರೆ ಉತ್ತರ ಕರ್ನಾಟಕಕ್ಕೆ ಹೊಸದಾಗಿ  ಯಾವುದೇ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಿಸಿಲ್ಲ. ಕಳೆದ ಬಾರಿಯ ಬಜೆಟ್ ಜತೆಗೆ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ವಿವಿಧ ಯೋಜನೆಯನ್ನು ಪರಿಷ್ಕರಿಸಿ ಹೊಸ ಕಾರ್ಯಕ್ರಮ ಘೋಷಿಸಬೇಕಿತ್ತು. ಆದರೆ ಯಾವುದೇ ಕಾರ್ಯಕ್ರಮ ಘೋಷಿಸಿಲ್ಲ. ಹೀಗಾಗಿ ಬಜೆಟ್ ಕಾರ್ಯಕ್ರಮ ಜಾರಿಗೂ ಮುಂಚೆ ಕೆಲವು ಕಾರ್ಯಗಳನ್ನಾದರೂ ಸೇರ್ಪಡೆ ಮಾಡಿ, ಕೊರತೆಯನ್ನು ಸರಿಪಡಿಸಿ ಎಂದು ಒತ್ತಾಯಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com